Connect with us

Bollywood

ಅಭ್ಯಾಸದ ವೇಳೆ ಗಾಯಗೊಂಡ ಡ್ಯಾನ್ಸರ್ – ನಟ ವರುಣ್‍ರಿಂದ ಚಿಕಿತ್ಸೆಗೆ 5 ಲಕ್ಷ ರೂ. ಸಹಾಯ

Published

on

ಮುಂಬೈ: ಬಾಲಿವುಡ್ ನಟ ವರುಣ್ ಧವನ್ ಡ್ಯಾನ್ಸ್ ಅಭ್ಯಾಸದ ವೇಳೆ ಗಾಯಗೊಂಡಿದ್ದ ಯುವ ಡ್ಯಾನ್ಸರ್ ಚಿಕಿತ್ಸೆಗೆ 5 ಲಕ್ಷ ರೂ. ನೀಡಿ ಸಹಾಯ ಮಾಡಿದ್ದಾರೆ.

ಇಶಾನ್ ಡ್ಯಾನ್ಸ್ ಅಭ್ಯಾಸದ ವೇಳೆ ಡಬಲ್ ಫ್ರಂಟ್ ಫ್ಲಿಪ್ ಒಡೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಕುತ್ತಿಗೆಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾನೆ. ಈ ವಿಷಯ ತಿಳಿದ ಹಲವು ಡ್ಯಾನ್ಸರ್ ಗಳು ಇಶಾನ್ ಚಿಕಿತ್ಸೆಗೆ ಹಣವನ್ನು ಸಂಗ್ರಹಿಸಲು ಶುರು ಮಾಡಿದ್ದರು.

ಡ್ಯಾನರ್ಸ್ ಹಣ ಸಂಗ್ರಹಿಸುತ್ತಿರುವ ವಿಷಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದನ್ನು ನೋಡಿದ ವರುಣ್ ಇನ್‍ಸ್ಟಾಗ್ರಾಂ ಮೆಸೇಜ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಇಶಾನ್ ಬಗ್ಗೆ ಮಾಹಿತಿ ಪಡೆದು ಸಾಹಯಕ್ಕೆ ಮುಂದಾಗಿದ್ದಾರೆ.

ವರುಣ್, ಇಶಾನ್ ಚಿಕಿತ್ಸೆಗಾಗಿ 5 ಲಕ್ಷ ರೂ. ಹಣ ನೀಡಿದ್ದಾರೆ. ಡ್ಯಾನ್ಸರ್ ವೊಬ್ಬರು ವರುಣ್ ಜೊತೆ ಚಾಟ್ ಮಾಡಿದ ಸ್ಕ್ರೀನ್ ಶಾಟ್ ತೆಗೆದು ಅದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ಸ್ಕ್ರೀನ್ ಶಾಟ್ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವರುಣ್ ಧವನ್ ನಿರ್ದೇಶಕ ರೆಮೋ ಡಿಸೋಜಾ ನಿರ್ದೇಶನದ ‘ಸ್ಟ್ರೀಟ್ ಡ್ಯಾನ್ಸರ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ವರುಣ್‍ಗೆ ನಾಯಕಿಯಾಗಿ ಶ್ರದ್ಧಾ ಕಪೂರ್ ಹಾಗೂ ನೋರಾ ಫತೇಹಿ ನಟಿಸುತ್ತಿದ್ದಾರೆ. ಇದಲ್ಲದೆ ವರುಣ್ ನಟಿ ಸಾರಾ ಅಲಿ ಖಾನ್ ಜೊತೆ ‘ಕೂಲಿ ನಂ. 1’ ಚಿತ್ರದಲ್ಲಿ ನಟಿಸುತ್ತಿದ್ದಾರೆ.