ಲಕ್ನೋ: ಸರ್ಕಾರಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿದ್ದರೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಂಡು ನಿರೋದ್ಯೋಗಿಗಳ ಕಷ್ಟಗಳಿಗೆ ಸ್ಪಂದಿಸಿ ಎಂದು ಉತ್ತರ ಪ್ರದೇಶದ ಸರ್ಕಾರಕ್ಕೆ ಸಂಸದ ವರುಣ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.
ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಮೆರವಣಿಗೆಯಲ್ಲಿ ಬಿಜೆಪಿಯ ಈ ನಿಲುವಿಗೆ ವಿರೋಧವನ್ನು ವ್ಯಕ್ತಪಡಿಸುತ್ತಿರುವ ಪ್ರತಿಭಟನಾಕರರ ವೀಡಿಯೋವನ್ನು ಬಿಜೆಪಿ ಸಂಸದರು ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಲಾಠಿ ಚಾರ್ಜ್ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರೆಲ್ಲರೂ ಭಾರತೀಯರು. ಆದರೆ ಅವರ ಕುಂದು ಕೊರತೆಗಳನ್ನು ಕೇಳಲು ಯಾರೂ ಸಿದ್ಧರಿಲ್ಲ. ನಿಮ್ಮ ಮಕ್ಕಳು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದರೇ ಹೀಗೆ ವರ್ತಿಸಲು ಸಾಧ್ಯವಾಗುತ್ತಿತ್ತಾ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
Advertisement
Advertisement
ರಾಜ್ಯದಲ್ಲಿ 2019ರಲ್ಲಿ ನಡೆದ 69,000 ಸಹಾಯಕ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಪ್ರತಿಭಟನಾಕಾರರು ನಿರಂತರ ಆಂದೋಲನವನ್ನು ನಡೆಸುತ್ತಿದ್ದಾರೆ. ಅವರು ಮಧ್ಯ ಲಕ್ನೋದ ಛೇದಕದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಪೊಲೀಸರು ಲಾಠಿಚಾರ್ಜ್ ನಡೆಸಿದರು. ಪೊಲೀಸರ ಕ್ರಮಕ್ಕೆ ವಿರೋಧ ಪಕ್ಷಗಳಾದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅಖಿಲೇಶ್ ಯಾದವ್ ನೇತೃತ್ವದ ಪಕ್ಷವು ಲಾಠಿಚಾರ್ಜ್ ಅನ್ನು ಖಂಡಿಸಿದೆ. ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿ ಬಿಜೆಪಿ ಮತ ಕೇಳಿದಾಗ ಜನರು ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಮನವಿ ಮಾಡಿದರು. ಇದನ್ನೂ ಓದಿ: ಅಪ್ಪುಗೆ ವಿಶೇಷವಾಗಿ ಗೌರವ ಸಲ್ಲಿಸಿದ ಕ್ರಿಕೆಟಿಗ ಡೇವಿಡ್ ವಾರ್ನರ್
Advertisement
ये बच्चे भी मां भारती के लाल हैं, इनकी बात मानना तो दूर, कोई सुनने को तैयार नहीं है। इस पर भी इनके ऊपर ये बर्बर लाठीचार्ज।
अपने दिल पर हाथ रखकर सोचिए क्या ये आपके बच्चे होते तो इनके साथ यही व्यवहार होता??
आपके पास रिक्तियां भी हैं और योग्य अभ्यर्थी भी, तो भर्तियां क्यों नहीं?? pic.twitter.com/6F67ZDJgzW
— Varun Gandhi (@varungandhi80) December 5, 2021
Advertisement
ವರುಣ್ ಗಾಂಧಿ ಅವರ ಈ ಟ್ವೀಟ್‌ನಿಂದ ಪಕ್ಷದ ನೀತಿ ನಿಯಮಗಳನ್ನು ಅನುಸರಿಸುತ್ತಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ತಿಂಗಳಷ್ಟೇ ವಿವಾದಾತ್ಮಕ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಅವರಿಗೆ ಪತ್ರವನ್ನು ಬರೆದಿದ್ದರು. ಇದರಲ್ಲಿ ರೈತರ ವಿವಿಧ ಬೇಡಿಕೆಯನ್ನು ಈಡೇರಿಸುವುದರ ಜೊತೆಗೆ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಒದಗಿಸಿ ರೈತರ ವಿರುದ್ಧ ದಾಖಲಾಗಿರುವ ದೂರುಗಳನ್ನು ಹಿಂಪಡೆಯಬೇಕು ಎಂದಿದ್ದರು. ಅಷ್ಟೇ ಅಲ್ಲದೇ ಲಕ್ಕಿಂಪುರ ಖೇರಿ ಘಟನೆಯಲ್ಲಿ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಚಲಾಯಿಸುತ್ತಿದ್ದ ವಾಹನದಿಂದ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹಾರಿಹಾಯ್ದಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಸಚಿವ ಅಜಯ್ ಕುಮಾರ್ ಮಿಶ್ರಾ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ