ನವದೆಹಲಿ: ಅವರದ್ದೇ ಪಕ್ಷದ ವಿರುದ್ಧ ಕೆಲವು ವಿಚಾರಗಳಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ನಿರುದ್ಯೋಗ ಸಮಸ್ಯೆಯ ಕುರಿತಾಗಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.
ಇಂದು ದೇಶದಲ್ಲಿ ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿ ಹೊರಹೊಮ್ಮುತ್ತಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದೆ. ಇದರಿಂದ ದೂರ ಸರಿಯುವುದು ಎಂದರೆ ಹತ್ತಿಯಿಂದ ಬೆಂಕಿಯನ್ನು ಮುಚ್ಚಲು ಪ್ರಯತ್ನಿಸಿದಂತೆ ಎಂದು ಬಿಜೆಪಿ ಸರ್ಕಾರವನ್ನು ಎಚ್ಚರಿಸಿ ಟ್ವೀಟ್ ಮಾಡಿ ಖಾಸಗಿ ಸುದ್ದಿ ವಾಹಿನಿಯ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಶೀಘ್ರವೇ 50 ದೇಶಗಳಲ್ಲಿ ಲಭ್ಯವಾಗಲಿದೆ ಡಿಸ್ನಿ ಪ್ಲಸ್
ವರುಣ್ ಹಂಚಿಕೊಂಡಿರುವ ವೀಡಿಯೋದಲ್ಲಿ, ಯುವಕನೊಬ್ಬ ನಿರುದ್ಯೋಗದ ಬಗ್ಗೆ ಮಾತನಾಡಿದ್ದಾನೆ. ರೈಲ್ವೆ ನೇಮಕಾತಿ ವಿರುದ್ಧದ ಪ್ರತಿಭಟನೆಯನ್ನು ಸರ್ಕಾರ ನಿರ್ವಹಿಸಿದ ರೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾನೆ. ನಿರುದ್ಯೋಗದ ಸಮಸ್ಯೆಯನ್ನು ಪರಿಹರಿಸದಿದ್ದರೆ ಅಧಿಕಾರದಲ್ಲಿ ಇರುವವರನ್ನು ಬದಲಾಯಿಸಬೇಕಾಗುತ್ತದೆ ಎಂದೂ ಯುವಕ ಎಚ್ಚರಿಕೆ ನೀಡಿದ್ದಾನೆ. ಇದನ್ನೂ ಓದಿ: ಹಾರವನ್ನು ಕುತ್ತಿಗೆಗೆ ಎಸೆದ ವರ- ಮದುವೆ ಕ್ಯಾನ್ಸಲ್ ಮಾಡಿದ ವಧು
देश में आज बेरोज़गारी सबसे बड़ी समस्या बनकर उभर रही है। स्थिति विकराल होती जा रही है। इससे मुंह मोड़ना कपास से आग ढकने जैसा है। pic.twitter.com/xR1E2O7pY1
— Varun Gandhi (@varungandhi80) January 28, 2022
ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು, ಕೃಷಿ ಕಾಯ್ದೆ ಮತ್ತು ಇತರ ವಿಚಾರಗಳ ಕುರಿತು ವರಣ್ ಗಾಂಧಿ ಟೀಕಾ ಪ್ರಹಾರ ನಡೆಸುತ್ತಲೇ ಇದ್ದಾರೆ. ರೈಲ್ವೆ ನೇಮಕಾತಿ ಪ್ರಕ್ರಿಯೆ ವಿರುದ್ಧ ಉತ್ತರ ಪ್ರದೇಶ ಮತ್ತು ಬಿಹಾರದ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ವರಣ್ ಗಾಂಧಿ ಅವರ ನಿರುದ್ಯೋಗದ ಕುರಿತ ಟ್ವೀಟ್ ಮಹತ್ವ ಪಡೆದುಕೊಂಡಿದೆ.