‘ಓದೆಲಾ 2’ನಲ್ಲಿ ವಸಿಷ್ಠ ಸಿಂಹ ಪಾತ್ರ ಹೇಗಿದೆ? ಇಲ್ಲಿದೆ ಅಪ್‌ಡೇಟ್

Public TV
1 Min Read
Tamannaah Bhatia 2 1

ಸ್ಯಾಂಡಲ್‌ವುಡ್‌ನ (Sandalwood) ಕಂಚಿನ ಕಂಠದ ನಟ ವಸಿಷ್ಠ ಸಿಂಹ (Vasishta Simha) ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಜತೆಗೆ ಪರಭಾಷೆಯಲ್ಲಿಯೂ ಮಿಂಚುತ್ತಿದ್ದಾರೆ. ಗಾಯಕನಾಗಿ ತೆಲುಗು ಚಿತ್ರಕ್ಕೆ ಪರಿಚಿತರಾಗಿದ್ದ ವಸಿಷ್ಠ ಸಿಂಹ `ಓದೆಲಾ ರೈಲ್ವೆ ಸ್ಟೇಷನ್’ ಸಿನಿಮಾ ಮೂಲಕ ನಾಯಕನಾಗಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿದ್ದಾರೆ. ಈ ಮೂಲಕ ತೆಲುಗು ನೆಲದಲ್ಲಿ ಗಾಯನದ ಜೊತೆಗೆ ಕಲಾ ಸೇವೆಯನ್ನೂ ಮುಂದುವರೆಸಲಿದ್ದಾರೆ.

vasista simha

2022ರಲ್ಲಿ ಒಟಿಟಿಯಲ್ಲಿ ಬಿಡುಗಡೆಯಾಗಿದ್ದ ಓದೆಲಾ ರೈಲ್ವೆ ಸ್ಟೇಷನ್ ಸಿನಿಮಾಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಈ ಚಿತ್ರದಲ್ಲಿ ವಸಿಷ್ಠ ಸಿಂಹ ವಿಭಿನ್ನ ಪಾತ್ರದಲ್ಲಿ ಅಭಿನಯ ಮಾಡಿದ್ದರು. ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದೂವರೆಗೂ ಮಾಡಿರದಂತಹ ವಿಶಿಷ್ಟ ಪಾತ್ರದಲ್ಲಿ ವಸಿಷ್ಠ ಕಾಣಿಸಿದ್ದಾರೆ. ಇದೀಗ ಓದೆಲಾ ರೈಲ್ವೆ ಸ್ಟೇಷನ್ ಪಾರ್ಟ್ 2 (Odela Railway Station 2) ತಯಾರಾಗುತ್ತಿದೆ. ಅದರ ಭಾಗವಾಗಿ ನಿನ್ನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ. ಮಿಲ್ಕಿ ಬ್ಯೂಟಿ ತಮನ್ನಾ (Tamannaah Bhatia) ಮತ್ತು ವಸಿಷ್ಠ ಸಿಂಹ ಫೋಟೋಗೆ ಪೋಸ್ ಕೊಟ್ಟಿದ್ದು, ಇದರಲ್ಲಿ ಹರಿಪ್ರಿಯಾ ಕೂಡ ಇದ್ದಾರೆ. ಓದೆಲಾ ರೈಲ್ವೆ ಸ್ಟೇಷನ್ ಸೀಕ್ವೆಲ್‌ನ ಶೂಟಿಂಗ್ ನಿನ್ನೆಯಿಂದಲೇ ಪ್ರಾರಂಭವಾಗಿದೆ. ಇದನ್ನೂ ಓದಿ:ಅಂಬಾನಿ ಮಗನ ಅದ್ಧೂರಿ ಪ್ರೀ-ವೆಡ್ಡಿಂಗ್‌ನಲ್ಲಿ ಮಿಂಚಿದ ಸೆಲೆಬ್ರಿಟಿಗಳು

Tamannaah Bhatia 2

ಓದೆಲಾ ರೈಲ್ವೆ ಸ್ಟೇಷನ್ ಮೊದಲ ಭಾಗದಲ್ಲಿ ನಟಿ ಹೆಬಾ ಪಟೇಲ್ ಜೊತೆ ವಸಿಷ್ಠ ಸಿಂಹ ಅಭಿನಯಿಸಿದ್ದರು. ಆದರೆ ಎರಡನೇ ಭಾಗದಲ್ಲಿ ನಟಿ ತಮನ್ನಾ ಭಾಟಿಯಾ ಜೊತೆ ವಸಿಷ್ಠ ಸಿಂಹ ಹೆಜ್ಜೆ ಹಾಕಲಿದ್ದಾರೆ. ಹಾಗಂತ ಹೆಬಾ ಪಟೇಲ್ (Hebah Patel) ಇಲ್ಲ ಅಂತಲ್ಲ. ಅವರು ಕೂಡ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ:ಕರಿಮಣಿ ಮಾಲೀಕನನ್ನು ಪರಿಚಯಿಸಿದ ದೀಪಿಕಾ ದಾಸ್

ಮಧು ಕ್ರಿಯೇಷನ್ಸ್ ಮತ್ತು ಸಂಪತ್ ನಂದಿ ಟೀಂ ವರ್ಕ್ ಬ್ಯಾನರ್ ನಡಿ ಡಿ.ಮಧು ಚಿತ್ರ ನಿರ್ಮಾಣ ಮಾಡುತ್ತಿದ್ದು, ಅಶೋಕ ತೇಜ ಓದೆಲಾ ರೈಲ್ವೆ ಸ್ಟೇಷನ್ ಸೀಕ್ವೆಲ್‌ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸೌಂದರ್ ರಾಜನ್ ಎಸ್ ಛಾಯಾಗ್ರಹಣ, `ಕಾಂತಾರ’ ಮ್ಯೂಸಿಕ್ ಮಾಂತ್ರಿಕ ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ.

Share This Article