‘ದಿ ಡಾರ್ಕ್ ವೆಬ್’ ಫಸ್ಟ್ ಲುಕ್ ರಿವೀಲ್ ಮಾಡಿದ ವಸಿಷ್ಠ

Public TV
1 Min Read
The Dark Web 1

ಸ್ಯಾಂಡಲ್ ವುಡ್ ನಲ್ಲಿ ಹೊಸ ರೀತಿಯ ಸಿನಿಮಾಗಳು ಹೊಸ ಕಾನ್ಸೆಪ್ಟ್ ಗಳು ಆಗಾಗ ಬರ್ತಾನೆ ಇರುತ್ತವೆ. ಅದೇ ರೀತಿ ಪತ್ರಕರ್ತ ಮಂಜು ಬನವಾಸೆ ಹಾಗೂ ಹೆತ್ತೂರು ನಾಗರಾಜ್ ಎಂಎನ್ ತಮ್ಮ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಸೈಬರ್ ಕ್ರೈಂ ಆಧಾರಿತ ‘ದಿ ಡಾರ್ಕ್ ವೆಬ್’ (The Dark Web) ಎನ್ನುವ ಸಿನಿಮಾ ಮಾಡಿದ್ದು ರಿಲೀಸ್‌ಗೆ ತಯಾರಿ ಮಾಡುತ್ತಿದ್ದಾರೆ.

The Dark Web 2

ಸೈಬರ್ ಕ್ರೈಂ ಕಥಾ ಹಂದರ ಆಧಾರಿತ ‘ದಿ ಡಾರ್ಕ್ ವೆಬ್’ ಸಿನಿಮಾದ ಫಸ್ಟ್ ಲುಕ್ (First Look) ರಿಲೀಸ್ ಆಗಿದ್ದು ಕುತೂಹಲ ಹೆಚ್ಚಿಸಿದೆ. ‘ದಿ ಡಾರ್ಕ್ ವೆಬ್’ ಚಿತ್ರದ ಫಸ್ಟ್ ಲುಕ್ ಅನ್ನು ನಟ ವಸಿಷ್ಠ ಸಿಂಹ (Vasishtha Simha) ರಿವೀಲ್ ಮಾಡಿದ್ದಾರೆ. ತಮ್ಮದೇ ಊರಿನ ಪತ್ರಕರ್ತರು ಸೇರಿ ಮಾಡಿರೋ ಸಿನಿಮಾ ಬಗ್ಗೆ ನಟ ವಸಿಷ್ಠ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಫಸ್ಟ್ ಲುಕ್ ರಿಲೀಸ್ ಮಾಡಿದ ಮಾತಾಡಿದ ವಸಿಷ್ಠ, ‘ಜನನಿ ಜನ್ಮಭೂಮಿಶ್ಚ್ ಸ್ವರ್ಗಾದಪಿ ಗರಿಯಸಿ’ ಎಂಬ ಮಾತಿನಂತೆ ನಮ್ಮೂರು ಎಂದರೆ ಬರುವ ಭಾವನೆಯೇ ಬೇರೆ. ನನ್ನೂರು ಹಾಸನ ಎನ್ನುವುದು ಹೆಮ್ಮೆ. ಈಗ ಇಲ್ಲಿಯೂ ಸಾಕಷ್ಟು ಜನರು ಚಿತ್ರೋದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಆ ಸಂಖ್ಯೆ ಇನ್ನೂ ಹೆಚ್ಚಬೇಕು’ ಎಂದಿದರು.

‘ದಿ ಡಾರ್ಕ್ ವೆಬ್’ ಸಿನಿಮಾದಲ್ಲಿ ನಾಯಕನಾಗಿ ಯುವ ಪ್ರತಿಭೆ ಚೇತನ್ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಬಹುತೇಕ ಪತ್ರಕರ್ತರೇ ಅಭಿನಯ ಮಾಡಿರೋದು ಸಿನಿಮಾದ ವಿಶೇಷ. ಮಂಜು ಬನವಾಸೆ ನಿರ್ಮಾಣದ ಜೊತೆಗೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕಂಡಿದ್ದಾರೆ. ಇನ್ನು ಚಿತ್ರಕ್ಕೆ ಕಿರಣ್ ಸ್ವಾಮಿ ನಿರ್ದೇಶನ ಮಾಡಿದ್ದಾರೆ. ಚಂದ್ರಮೌಳಿ ಚಿತ್ರಕ್ಕೆ ಕ್ಯಾಮೆರಾ ವರ್ಕ್ ಮಾಡಿದ್ದು ವಿಶಾಕ್ ನಾಗಲಾಪುರ ಸಂಗೀತ ನೀಡಿದ್ದಾರೆ. ಸದ್ಯ ಸಿನಿಮಾದ ಫಸ್ಟ್ ಲುಕ್ ರಿವಿಲ್ ಆಗಿದ್ದು ಶೀಘ್ರದಲ್ಲಿಯೇ ಟೀಸರ್ ಬಿಡುಗಡೆ ಮಾಡಲು ಸಿನಿಮಾ ತಂಡ ಪ್ಲಾನ್ ಮಾಡಿಕೊಂಡಿದೆ.

Share This Article