ವಾಸುಕಿ ವೈಭವ್ ಮದುವೆಯಾದ ಹುಡುಗಿಯೂ ನಟಿ

Public TV
1 Min Read
Vasuki Vaibhav

ಯುವ ಸಂಗೀತ ನಿರ್ದೇಶಕ ವಾಸುಕಿ ವೈಭವ್ (Vasuki Vaibhav) ಇಂದು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ವಾಸುಕಿ ಮದುವೆ ಆಗುತ್ತಿರುವ ಬೃಂದಾ (Brunda) ಯಾರು ಎನ್ನುವ ವಿಚಾರವನ್ನು ಈವರೆಗೂ ವಾಸುಕಿ ಯಾರ ಜೊತೆಯೂ ಹಂಚಿಕೊಂಡಿರಲಿಲ್ಲ. ಬೃಂದಾ ಕೂಡ ರಂಗಭೂಮಿ ಕಲಾವಿದರು. ಸಾಕಷ್ಟು ನಾಟಕಗಳಲ್ಲಿ ಅವರು ನಟಿಸಿದ್ದಾರೆ. ಸ್ವತಃ ವಾಸುಕಿ ಜೊತೆಯೇ ರಂಗಭೂಮಿಯಲ್ಲಿ ಕೆಲಸ ಮಾಡಿದ್ದಾರೆ. ಹಲವು ವರ್ಷಗಳಿಂದಲೂ ಈ ಜೋಡಿ ಪ್ರೀತಿಸುತ್ತಿದ್ದ ಎನ್ನುತ್ತವೆ ಮೂಲಗಳು.

Vasuki Vaibhav 1

ವಾಸುಕಿ ಅವರ ಮದುವೆ ತೀರಾ ಸರಳವಾಗಿ ಇಂದು ನಡೆದಿದೆ. ನಟ ಸಿಹಿ ಕಹಿ ಸೇರಿದಂತೆ ಹಲವು ಕಲಾವಿದರು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಮದುವೆ ತೀರಾ ಖಾಸಗಿ ಆಗಿರಲಿ ಎಂದು ಅವರು ಮಾಧ್ಯಮಗಳಿಗೂ ಮದುವೆ ವಿಚಾರವನ್ನು ತಿಳಿಸಿರಲಿಲ್ಲ.

Vasuki Vaibhav 2

ಮದುವೆ ವಿಚಾರವನ್ನು ವಾಸುಕಿ ಗುಟ್ಟಾಗಿದ್ದರು. ಅಚಾನಕ್ಕಾಗಿ ನಟಿ (Actress) ತಾರಾ ಈ ವಿಷಯವನ್ನು ಹೇಳಿಕೊಂಡಿದ್ದರು. ಟಗರು ಪಲ್ಯ ಸಿನಿಮಾದಲ್ಲಿ ವಾಸುಕಿ ಮದುವೆ ಆಗುವ ಗಂಡಿನ ಪಾತ್ರ ಮಾಡಿದ್ದರು. ಈ ಕುರಿತಾಗಿ ಮಾತನಾಡುತ್ತಾ ನಟಿ ತಾರಾ ಅತೀ ಶೀಘ್ರದಲ್ಲೇ ವಾಸುಕಿ ಮದುವೆ  (Marriage) ಆಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

Vasuki Vaibhav 3

ಹಲವು ತಿಂಗಳ ಹಿಂದೆಯೇ ವಾಸುಕಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ವಿಷಯ ಹರಿದಾಡುತ್ತಿತ್ತು. ಬಹುಕಾಲದ ಗೆಳೆತಿಯೊಂದಿಗೆ ಅವರು ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾದಂತೆ ಕಾಣುತ್ತಿದೆ. ಇಂದು ವಾಸುಕಿ ಸಪ್ತಪದಿ ತುಳಿಯಲಿದ್ದಾರೆ ಎನ್ನುವುದು ತಾಜಾ ಸಮಾಚಾರ.

 

ಮದುವೆ ಕುರಿತಂತೆ ವಾಸುಕಿ ಒಪ್ಪಿಕೊಂಡಿದ್ದರು. ತಾರಾ ಅವರಿಗೆ ‘ಅಯ್ಯೋ.. ಹೇಳಬೇಡಿ’ ಎಂದು ಕೇಳಿಕೊಂಡಿದ್ದರೂ, ವಿಷಯವಂತೂ ಬಹಿರಂಗವಾಗಿತ್ತು. ಆದರೆ, ಅಧಿಕೃತವಾಗಿ ಈ ವಿಷಯದ ಕುರಿತು ವಾಸುಕಿ ವೈಭವ್ ಅವರೇ ಅಧಿಕೃತವಾಗಿ ಹೇಳಬೇಕಿತ್ತು. ಇಂದು ಅವರು ಮದುವೆ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Share This Article