ಮೈಸೂರು: ಆ.13 ರಂದು ಕರ್ನಾಟಕ ಬಂದ್ ಫಿಕ್ಸ್. ಅದನ್ನು ವಾಪಸ್ ಪಡೆಯುವ ಮಾತೇ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ತಿಳಿಸಿದರು.
ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ಸಮಗ್ರ ಕನ್ನಡಿಗರ ಪರವಾಗಿ ಬಂದ್‌ಗೆ ಕರೆ ಕೊಟ್ಟಿದ್ದೇವೆ. ಕಾವೇರಿ ನೀರು ಒಂದೇ ವಿಚಾರ ಅಲ್ಲ. ಗಡಿ ಸಮಸ್ಯೆ, ಯುವಕರಿಗೆ ಉದ್ಯೋಗ, ಮೈಸೂರಿನ ಸಮಗ್ರ ಅಭಿವೃದ್ಧಿ, ಕಾವೇರಿ ನೀರು ಹಂಚಿಕೆ ವಿಚಾರ, ಬೆಳಗಾವಿ ಎಂಇಎಸ್ ಪುಂಡಾಟ ಸೇರಿದಂತೆ ಹಲವು ವಿಚಾರ ಮುಂದಿಟ್ಟು ಕರ್ನಾಟಕ ಬಂದ್ ಕರೆ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಾವೇರಿ ನದಿ ಉಭಯ ರಾಜ್ಯಗಳ ಜನರನ್ನು ವಿಭಜಿಸುವ ಶಕ್ತಿಯಾಗಬಾರದು: ತ.ನಾಡು ಸಿಎಂಗೆ ವಿಜಯೇಂದ್ರ ಪತ್ರ
ಸಿಎಂ ಡಿ.ಕೆ.ಶಿವಕುಮಾರ್ ಬಂದ್ ವಾಪಸ್ ಪಡೆಯಿರಿ ಎಂದು ಮನವಿ ಮಾಡಿದ್ದಾರೆ. ನಾವು ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯಲ್ಲ. ಈಗಾಗಲೇ ದಿನಾಂಕವನ್ನೂ ನಿಗದಿ ಮಾಡಲಾಗಿದೆ. ಆ.13 ರಂದು ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿದರು.



