ರಾಮನಗರ: ಕಾಂಗ್ರೆಸ್ ಸರ್ಕಾರ ಇದ್ದಾಗ ಏಕೆ ಮೇಕೆದಾಟು ಯೋಜನೆ ಮಾಡಲಿಲ್ಲ. ರಾಜಕೀಯ ಮಾಡಲು ಈಗ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಗೆ ನನ್ನ ಬೆಂಬಲ ಇಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ರಾಮನಗರದ ಐಜೂರು ವೃತ್ತದಲ್ಲಿ ಮೇಕೆಗಳನ್ನು ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ನಡೆಸುವ ಮೇಕೆದಾಟು ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ. ಅವರ ಪಾಡಿಗೆ ಅವರು ಪಾದಯಾತ್ರೆ ಮಾಡಿಕೊಳ್ಳಲಿ. ಮೇಕೆದಾಟು ಯೋಜನೆ ಆಗಬೇಕೆಂದು ಕಳೆದೊಂದು ವರ್ಷಗಳಿಂದಲೂ ನಿರಂತರವಾಗಿ ಹೋರಾಟ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಏಕೆ ಮೇಕೆದಾಟು ಯೋಜನೆ ಮಾಡಲಿಲ್ಲ. ರಾಜಕೀಯ ಮಾಡಲು ಈಗ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಗೆ ನನ್ನ ಬೆಂಬಲ ಇಲ್ಲ. ಅವರು ಪಾದಯಾತ್ರೆ ಮಾಡಿಕೊಳ್ಳಲಿ. ನಾವು ಮುಂದಿನ ದಿನಗಳಲ್ಲಿ ಮೇಕೆದಾಟು ಯೋಜನೆ ಬಗ್ಗೆ ಉಗ್ರ ಚಳುವಳಿ ನಡೆಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ ಒಟ್ಟು 2,479 ಪ್ರಕರಣ – ಬೆಂಗ್ಳೂರಲ್ಲಿ 2,053 ಕೇಸ್
ಸಿಎಂ ಇರುವ ವೇದಿಕೆಯಲ್ಲಿ ಸಚಿವರ ಭಾಷಣಕ್ಕೆ ಸಂಸದರ ಅಡ್ಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಿಎಂ ಇರುವ ವೇದಿಕೆಯಲ್ಲಿ ಅವರು ಹಾಗೆ ನಡೆದುಕೊಳ್ಳಬಾರದಿತ್ತು. ವೇದಿಕೆಯಲ್ಲಿ ಮಾತನಾಡುವಾಗ ಆವೇಶದ ಮಾತು ಆಡುವುದು ಸಹಜ. ಇದಕ್ಕೆ ವೇದಿಕೆಯಲ್ಲಿ ಮಾತನಾಡಿ ಉತ್ತರ ನೀಡಬೇಕೇ ಹೊರತು ಈ ರೀತಿ ವೀರಾವೇಷದಲ್ಲಿ ನಡೆದುಕೊಂಡಿದ್ದು ಸರಿಯಲ್ಲ. ಕೂಡಲೇ ಸಂಸದರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊರೊನಾ ಮೂರನೇ ಅಲೆ ಭೀತಿ – ಫೀಲ್ಡಿಗಿಳಿದ ಚಾಮರಾಜನಗರದ ಮಹಿಳಾ ಅಧಿಕಾರಿಗಳು