ಚಾಮರಾಜನಗರ: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ನಡೆಯುವ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ನನಗೆ ಈ ಬಾರಿ ಕಾಂಗ್ರೆಸ್ ಬೆಂಬಲ ನೀಡಬೇಕು, ಲೋಕಸಭೆ ಹಾಗೂ ರಾಜ್ಯಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್‍ಗೆ ಬೆಂಬಲ ನೀಡಿದ್ದೇನೆ. ಈಗ ವಿಧಾನ ಪರಿಷತ್ ಚುನಾವಣೆಯಲ್ಲಿ ನನ್ನನ್ನು ಕಾಂಗ್ರೆಸ್ ಬೆಂಬಲಿಸಬೇಕು. ಈ ಬಗ್ಗೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರಲ್ಲಿ ಕಳಕಳಿಯಿಂದ ಮನವಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಪರೀಕ್ಷೆಯಲ್ಲಿ 100ಕ್ಕೆ 89 ಅಂಕ ಪಡೆದ 104ರ ವೃದ್ಧೆಯ ಸ್ಫೂರ್ತಿದಾಯಕ ಕಥೆ
ವಿಧಾನ ಪರಿಷತ್‍ನಲ್ಲಿ ಪ್ರಜಾ ಪ್ರಭುತ್ವ ಉಳಿಯಬೇಕಿದೆ. ವಿಧಾನ ಪರಿಷತ್‍ಗೆ ಉತ್ತಮವಾಗಿ ಮಾತನಾಡುವವರು ಆಯ್ಕೆಯಾಗಬೇಕಾಗಿದೆ. ರಾಜ್ಯದ ಜ್ವಲಂತ ಸಮಸ್ಯೆಗಳಗಳ ಬಗ್ಗೆ ಚರ್ಚೆಯಾಗಬೇಕಿದೆ. ಹೀಗಾಗಿ ಕಾಂಗ್ರೆಸ್ ತಮಗೆ ಸಂಪೂರ್ಣ ಬೆಂಬಲ ಕೊಡಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಗ್‌ಬಾಸ್ ಲವ್ ಬರ್ಡ್ಸ್ ಭೇಟಿಯಾದ ಶುಭಾ ಪೂಂಜಾ