ಚಾಮರಾಜನಗರ: ರಷ್ಯಾ ಹಾಗೂ ಉಕ್ರೇನ್ ಯುದ್ದದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪ್ರಾರ್ಥಿವ ಶರೀರವನ್ನು ದೇಶಕ್ಕೆ ತರುವಲ್ಲಿ ಭಾರತ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್, ರಾಜ್ಯ ಸರ್ಕಾರದವರು ಮೃತನ ನಿವಾಸಕ್ಕೆ ತೆರಳಿ ಸುಮ್ಮನೆ ಮೊಸಳೆ ಕಣ್ಣೇರು ಹಾಕಿ ಸಾಂತ್ವನ ಹೇಳಿದೆಯೇ ಹೊರತು ಪ್ರಾರ್ಥಿವ ಶರೀರ ತರುವ ಪ್ರಯತ್ನ ಮಾಡಿಲ್ಲ. ನವೀನ್ ಪ್ರಾರ್ಥಿವ ಶರೀರ ತರುವಂತೆ ಒತ್ತಾಯಿಸಿ ಮಾರ್ಚ್ 18 ರಂದು ಹಾವೇರಿ ಜಿಲ್ಲಾಡಳಿತ ಭವನದ ಎದುರು ಸತ್ಯಾಗ್ರಹ ಹಮ್ಮಿಕೊಳ್ಳಲಾಗುವು ಎಂದು ತಿಳಿಸಿದರು. ಇದನ್ನೂ ಓದಿ: ಉಕ್ರೇನ್‌ನ ಭಾರತೀಯ ರಾಯಭಾರ ಕಚೇರಿ ಪೋಲೆಂಡ್‌ಗೆ ತಾತ್ಕಾಲಿಕ ಸ್ಥಳಾಂತರ
ಇದೇ ವೇಳೆ ಗುಂಡ್ಲುಪೇಟೆ ತಾಲೂಕು ಮಡಹಳ್ಳಿ ಗ್ರಾಮದ ಬಿಳಿಕಲ್ಲು ಗುಡ್ಡ ಕುಸಿತ ಪ್ರಕರಣದ ಬಗ್ಗೆ ಮಾತನಾಡಿ, ಉನ್ನತ ಮಟ್ಟದ ತನಿಖೆ ನಡೆಸಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಾನು ಸಂಪುಟ ಸೇರ್ಪಡೆಯಾಗುವುದು ಕೇವಲ ಉಹಾಪೋಹ, ನನಗೆ ಯಾವುದೇ ಆಸೆಯಿಲ್ಲ: ಬಿ.ವೈ.ವಿಜಯೇಂದ್ರ
ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ದೊಡ್ಡಮಟ್ಟದ ಅನಾಹುತ ನಡೆದಿದೆ. ಆದರೆ ಯಾವೊಬ್ಬ ಅಧಿಕಾರಿಗೂ ಶಿಕ್ಷೆಯಾಗಿಲ್ಲ. ಕ್ವಾರೆಯ ಉಪ ಗುತ್ತಿಗೆದಾರನ ಬಂಧನವೂ ಆಗಿಲ್ಲ. ಇದನ್ನು ನೋಡಿದರೆ ಜಿಲ್ಲಾಡಳಿತ ಪ್ರಕರಣವನ್ನು ಮುಚ್ಚಿ ಹಾಕುವಂತೆ ಕಾಣುತ್ತಿದೆ ಎಂದು ದೂರಿದರು. ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರಿಗೆ 25 ಲಕ್ಷ ರೂ. ಪರಿಹಾರ ಕೊಡುವಂತೆ ಆಗ್ರಹಿಸಿದರು.