ಬೆಂಗಳೂರು: ಜಿ ರಾಮ್ ಜಿ ಕಾಯ್ದೆಗೆ (VB–G RAM G Act) ರಾಜ್ಯ ಕಾಂಗ್ರೆಸ್ ಸರ್ಕಾರ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಕ್ಯಾಬಿನೆಟ್ ತೀರ್ಮಾನಿಸಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟಕ್ಕೆ ಅಡ್ವೊಕೇಟ್ ಜನರಲ್ ಅಭಿಪ್ರಾಯ ಪಡೆದ ಕ್ಯಾಬಿನೆಟ್, ಕೋರ್ಟ್‌ನಲ್ಲಿ ಕಾನೂನು ಹೋರಾಟ, ಜನತಾ ನ್ಯಾಯಾಲಯದಲ್ಲಿ ರಾಜಕೀಯ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ಸಂಸತ್ತಿನ ಮೇಲ್ಮನೆಯಲ್ಲಿ ಮಧ್ಯರಾತ್ರಿ ಜಿ ರಾಮ್ ಜಿ ಮಸೂದೆ ಅಂಗೀಕಾರ; ವಿಪಕ್ಷಗಳ ಸಭಾತ್ಯಾಗ
ರಾಷ್ಟ್ರದಲ್ಲಿ ಸದ್ದು ಮಾಡಿದ ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣದ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಕ್ಯಾಬಿನೆಟ್‌ನಲ್ಲಿ ಸಿಎಂ, ಡಿಸಿಎಂ, ಸಚಿವರಿಗೆ ಘಟನೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸಂಪೂರ್ಣ ವರದಿ ನೀಡಿದರು ಎನ್ನಲಾಗಿದೆ.

