ಟಾಲಿವುಡ್ ನಟ ವಿಜಯ್ ದೇವರಕೊಂಡ (Vijay Devarakonda) ‘ಫ್ಯಾಮಿಲಿ ಸ್ಟಾರ್’ (Family Star) ಸಿನಿಮಾದ ನಂತರ ಎರಡು ಬಿಗ್ ಪ್ರಾಜೆಕ್ಟ್‌ಗಳನ್ನು ಘೋಷಿಸಿದ್ದಾರೆ. ವಿಜಯ್ 14ನೇ ಚಿತ್ರಕ್ಕೆ (VD 14) ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದ್ದು, ಮೊದಲ ಬಾರಿಗೆ ‘ಖುಷಿ’ ಚಿತ್ರದ ಹೀರೋ ಡಬಲ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ.
‘ಟಾಕ್ಸಿವಾಲಾ’ ನಿರ್ದೇಶಕ ರಾಹುಲ್ ಜೊತೆ ವಿಜಯ್ ದೇವರಕೊಂಡ ಮತ್ತೊಮ್ಮೆ ಕೈಜೋಡಿಸಿದ್ದಾರೆ. ಮೊದಲ ಬಾರಿಗೆ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. 1854- 78ರ ಕಾಲಘಟ್ಟದ ಕಥೆ ಇದಾಗಿದ್ದು, ವಿಜಯ್ ತಂದೆ ಮತ್ತು ಮಗನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದ ಪವಿತ್ರಾ ಜಯರಾಂ ಅಂತ್ಯಕ್ರಿಯೆ
ಈಗಾಗಲೇ ಚಿತ್ರದ ಪೋಸ್ಟರ್ ಸಾಕಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಈ ಚಿತ್ರವನ್ನು 120 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ಡಬಲ್ ರೋಲ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿರುವ ಕಾರಣ, ವಿಜಯ್ ಪಾತ್ರಕ್ಕಾಗಿ ಸಕಲ ತಯಾರಿ ಮಾಡಿಕೊಳ್ತಿದ್ದಾರೆ.
ರಾಹುಲ್ ನಿರ್ದೇಶನದ ಈ ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸುತ್ತಾರೆ ಎನ್ನಲಾಗಿದೆ. ಈಗಾಗಲೇ ಚಿತ್ರತಂಡ ರಶ್ಮಿಕಾರನ್ನು ಸಂಪರ್ಕಿಸಿ ಕಥೆ ಹೇಳಿದೆ. ಸದ್ಯದಲ್ಲೇ ಚಿತ್ರದ ನಾಯಕಿ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ. ಇದನ್ನೂ ಓದಿ:ನಾವು ಮನೆಗಿಂತ ಜಾಸ್ತಿ ಸೆಟ್‌ನಲ್ಲಿ ಇದ್ವಿ- ಚಂದು ಗೌಡ
ಇನ್ನೂ ಈಗಾಗಲೇ ವಿಜಯ್ ಮತ್ತು ರಶ್ಮಿಕಾ ನಟಿಸಿರುವ ‘ಗೀತಾ ಗೋವಿಂದಂ’, ಡಿಯರ್ ಕಾಮ್ರೇಡ್ ಎರಡು ಚಿತ್ರಗಳು ಸೂಪರ್ ಹಿಟ್ ಆಗಿವೆ. ಹಾಗಾಗಿ ಇಬ್ಬರ ಕಾಂಬಿನೇಷನ್‌ನಲ್ಲಿ ಹೊಸ ಪ್ರೇಮ ಕಥೆ ತೋರಿಸಿದ್ರೆ ಖಂಡಿತಾ ಪ್ರೇಕ್ಷಕರಿಗೆ ಇಷ್ಟವಾಗುತ್ತೆ ಅನ್ನೋದು ನಿರ್ದೇಶಕ ರಾಹುಲ್ ಲೆಕ್ಕಾಚಾರ.