ದ.ಕ.ಜಿಲ್ಲಾ ಪತ್ರಕರ್ತರಿಗೆ ನಿವೇಶನ ನೀಡೋದು ನಮ್ಮ ಜವಾಬ್ದಾರಿ: ವೇದವ್ಯಾಸ್ ಕಾಮತ್

Public TV
2 Min Read
vedavyas kamath e1704988054916

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಕ್ರೀಯಾಶೀಲರಾಗಿದ್ದು, ಬ್ರ್ಯಾಂಡ್ ಮಂಗಳೂರು, ಗ್ರಾಮ ವಾಸ್ತವ್ಯ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮ ಮೂಲಕ ರಾಜ್ಯಕ್ಕೆ ಮಾದರಿಯಾದವರು. ಈ ಜಿಲ್ಲೆಯ ಪತ್ರಕರ್ತರ ಬಹುಕಾಲದ ಬೇಡಿಕೆಯಾದ ನಿವೇಶನದ ಕನಸು ನನಸು ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ನಗರದ ಲೇಡಿಹಿಲ್ ಪತ್ರಿಕಾಭವನದಲ್ಲಿ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಸಹಕಾರ ಸಂಘಗಳ ಕೊಡುಗೆ ಅಪಾರವಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ರಕರ್ತರ ಸಹಕಾರ ಸಂಘ ಅಸ್ತಿತ್ವಕ್ಕೆ ಬಂದಿರುವುದು ಹೆಮ್ಮೆಯ ವಿಷಯ. ಸಂಘವು ಅತೀ ಶೀಘ್ರವಾಗಿ ಬೆಳವಣಿಗೆ ಕಂಡು ಷೇರು, ಡೆಪಾಸಿಟ್ ಸಂಗ್ರಹಿಸಿ ಬ್ಯಾಂಕಿಂಗ್ ವ್ಯವಹಾರವನ್ನು ಆರಂಭಿಸಲಿ. ಜಿಲ್ಲಾಮಟ್ಟದಿಂದ ತಾಲೂಕು ಮಟ್ಟಕ್ಕೂ ವಿಸ್ತರಣೆಯಾಗಲಿ. ಈ ಮೂಲಕ ಪತ್ರಕರ್ತರಲ್ಲಿ ಶಕ್ತಿಯನ್ನು ತುಂಬುವ ಕೆಲಸವಾಗಲಿ. ಪತ್ರಕರ್ತರಿಗೆ ನಿವೇಶನ ಸೇರಿದಂತೆ ಬ್ಯಾಂಕಿಂಗ್ ವ್ಯವಹಾರವನ್ನು ಯಶಸ್ವಿಯಾಗಿ ಮುನ್ನಡೆಯಲು ಶಾಸಕರಾಗಿ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು. ಇದನ್ನೂ ಓದಿ: ಅರ್ಚಕನ ಬರ್ಬರ ಹತ್ಯೆ- ದೇವಸ್ಥಾನದಲ್ಲಿ ಅರೆ ಸುಟ್ಟ ಶವ

Vedavyas Kamath2

ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಪತ್ರಕರ್ತರು ಅತ್ತ ಬಿಪಿಎಲ್ ಅಲ್ಲ, ಇತ್ತ ಎಪಿಎಲ್ ಇಲ್ಲ ಎಂಬಂತೆ ಮಧ್ಯಮ ಕುಟುಂಬದಲ್ಲಿ ಬದುಕುವವರು. ಸಮಾಜಕ್ಕೆ ಸದಾ ಒಳಿತನ್ನು ಬಯಸುವ ಇಂತಹ ಪತ್ರಕರ್ತರಿಗೆ ಸಹಕಾರ ನೀಡುವುದು ನಮ್ಮ ಕರ್ತವ್ಯವಾಗಿದೆ. ಒಳ್ಳೆಯ ಉದ್ದೇಶದೊಂದಿಗೆ ಈ ಸಹಕಾರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಇದರ ಶ್ರೇಯೋಭಿವೃದ್ಧಿ ಮತ್ತು ನಿವೇಶನಕ್ಕೆ ಸಂಬಂಧಪಟ್ಟಂತೆ ನನ್ನಿಂದ ಸಂಪೂರ್ಣ ಸಹಕಾರ ನೀಡುತ್ತೇನೆ. ಸಹಕಾರ ಸಂಘಗಳು ಆರ್ಥಿಕ ಶಿಸನ್ನು ಬೆಳೆಸಿಕೊಂಡಲ್ಲಿ ಅತೀ ವೇಗವಾಗಿ ಬೆಳವಣಿಗೆ ಕಾಣಲು ಸಾಧ್ಯ ಎಂದರು. ಇದನ್ನೂ ಓದಿ: 8 ಸಾವಿರ ಕೋಟಿಯಲ್ಲಿ ಪ್ರಾರಂಭವಾದ ಎತ್ತಿನಹೊಳೆ ಯೋಜನೆ ಈಗ 23 ಸಾವಿರ ಕೋಟಿ ತಲುಪಿದೆ: ಹೆಚ್.ಡಿ.ಕೆ

Vedavyas Kamath

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ ಭಾಗವಹಿಸಿದ್ದರು. ಪತ್ರಕರ್ತರ ಗಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷೃ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಉಪಾಧ್ಯಕ್ಷೃ ಭಾಸ್ಕರ ರೆ ಕಟ್ಟ ವಂದಿಸಿದರು. ಸಹಕಾರಿ ಸಂಘದ ನಿರ್ದೇಶಕ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.

Share This Article
Leave a Comment

Leave a Reply

Your email address will not be published. Required fields are marked *