ಮಂಗಳೂರು: ಪಂಚರಾಜ್ಯ ಚುನಾವಣೆಯ ಫಲಿತಾಂಶವು ಬಿಜೆಪಿಯ ಅಭಿವೃದ್ಧಿ, ಸಧೃಡ ನಾಯಕತ್ವಕ್ಕೆ ಸಂದ ಗೆಲುವು. ಪಂಜಾಬ್ ಹೊರತುಪಡಿಸಿ ಉಳಿದ 4 ರಾಜ್ಯಗಳಲ್ಲಿ ಬಿಜೆಪಿ ಮತ್ತೆ ಆಡಳಿತಕ್ಕೇರುವ ಮೂಲಕ ದೇಶದ ಜನರು ಬಿಜೆಪಿಯ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ ಎನ್ನುವುದು ಸಾಬೀತಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಮೂಲಕ ಜನಾಶೀರ್ವಾದ ಪಡೆದಿದೆ. ಅವ್ಯಾಹತವಾಗಿ ಅಪಪ್ರಚಾರ ಮಾಡಿದ ಕಾಂಗ್ರೇಸ್ ಪಕ್ಷವು ಜನರಿಂದ ತಿರಸ್ಕೃತಗೊಂಡು ಮೂಲೆ ಗುಂಪಾಗಿದೆ. ಈ ಪಂಚರಾಜ್ಯ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆದಿದ್ದಾರೆ. ಇದನ್ನೂ ಓದಿ: ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಮೆಚ್ಚಿ ಮತ ನೀಡಿದ ಪ್ರತಿಯೊಬ್ಬ ಮತದಾರ ಪ್ರಭುವಿಗೂ ಧನ್ಯವಾದಗಳು ಹಾಗೂ ಗೆದ್ದು ಜನರ ಸೇವೆಗೆ ಆಯ್ಕೆಯಾದ ಎಲ್ಲಾ ಶಾಸಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?