– ಸ್ವತಂತ್ರ ಸ್ಪರ್ಧೆ ಬಗ್ಗೆ ನಿರ್ಧಾರ
ಬಾಗಲಕೋಟೆ: ಸ್ವಾಭಿಮಾನಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ಆಯೋಜನೆ ಮಾಡಿ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ (Veena Kashappanavar) ಗಳಗಳನೇ ಕಣ್ಣೀರು ಹಾಕಿದ್ದಾರೆ.
ಕಣ್ಣೀರು ಹಾಕುತ್ತಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವೀಣಾ, ಟಿಕೆಟ್ ಸಿಗುತ್ತೆ ಎಂದು ಸಾಕಷ್ಟು ನೀರೀಕ್ಷೆ ಇಟ್ಟುಕೊಂಡಿದ್ದೆ, ಆದರೆ ಹೇಗೆ ಟಿಕೆಟ್ ಕೈ ತಪ್ಪಿದೆ ಎಂದು ಗೊತ್ತಾಗ್ತಿಲ್ಲ. ನಾಯಕರು ನಮ್ಮ ಜಿಲ್ಲೆಯ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೆ, ಯಾರಿಂದ ಟಿಕೆಟ್ ತಪ್ಪಿತು ಎಂದು ಗೊತ್ತಿಲ್ಲ ಎಂದರು.
Advertisement
Advertisement
ರಾಜ್ಯ ನಾಯಕರನ್ನು ಕೇಳಿದ್ರೆ ಜಿಲ್ಲಾ ನಾಯಕರ ಹೆಸರು ಹೇಳ್ತಾರೆ. ಜಿಲ್ಲಾ ನಾಯಕರನ್ನ ಕೇಳಿದ್ರೆ ರಾಜ್ಯ ನಾಯಕರ ಹೆಸರು ಹೇಳ್ತಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಸ್ವೀಕರಿಸಿದ ಸ್ವತಂತ್ರ ಸ್ಪರ್ಧೆ ಬಗ್ಗೆ ನಿರ್ಧರಿಸುತ್ತೇನೆ ಎಂದು ವೀಣಾ ಕಾಶಪ್ಪನವರ್ ಹೇಳಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ಅಕ್ರಮದ ಬಗ್ಗೆ ಸಾಕ್ಷ್ಯಗಳೊಂದಿಗೆ ಕಾಂಗ್ರೆಸ್ ದೂರು ನೀಡಿತ್ತು: ಬಿಜೆಪಿ ತಿರುಗೇಟು
Advertisement
Advertisement
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದಕ್ಕೆ ಸಭೆ ಆಯೋಜನೆ ಮಾಡಲಾಗಿತ್ತು. ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಹುನಗುಂದ ಶಾಸಕ ವಿಜಯಾನಂದ್ ಕಾಶಪ್ಪನವರ್ ಭಾಗಿಯಾಗಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವವಣೆಗೆ ಬಾಗಲಕೋಟೆಯಿಂದ ಸಂಯುಕ್ತಾ ಪಾಟೀಲ್ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ಘೋಷಿಸಲಾಗಿದೆ.