ಬೆಳಗಾವಿ/ವಿಜಯಪುರ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಸಾವರ್ಕರ್ ವಿವಾದ ಜೋರಾಗಿದೆ. ಈ ಮಧ್ಯೆ ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ ನಡೆದಿದೆ.
Advertisement
ಈ ಬಾರಿ ಗಣೇಶೋತ್ಸವವನ್ನು ಸಾವರ್ಕರ್ ಉತ್ಸವವಾಗಿ ಆಚರಿಸುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಿನ್ನೆಯಷ್ಟೇ ಹೇಳಿದ್ದರು. ಇದರ ಬೆನ್ನಲ್ಲೇ ಈ ಬಾರಿ ಬೆಳಗಾವಿಯ ಐತಿಹಾಸಿಕ ಸಾರ್ವಜನಿಕ ಗಣೇಶೋತ್ಸವ ವೇಳೆ ಬೆಳಗಾವಿ ನಗರದಲ್ಲಿ ಪ್ರತಿಷ್ಠಾಪಿಸಲಾಗುವ ಪ್ರತಿಯೊಂದು ಗಣೇಶ ಮಂಟಪಗಳಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಫೋಟೋ ಇರಿಸುತ್ತೇವೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಇದನ್ನೂ ಓದಿ: ಐಸಿಸ್‍ನ ಮೊದಲ ಭಾರತೀಯ ಬಾಂಬರ್ ಬೆಂಗಳೂರಿನ ಟೆಕ್ಕಿ
Advertisement
Advertisement
ವಿಜಯಪುರ ಜಿಲ್ಲೆಯಲ್ಲೂ ಈ ಬಾರಿಯ ಗಣೇಶೋತ್ಸವದಲ್ಲಿ ವೀರ ಸಾವರ್ಕರ್ ವಿಷಯ ಹಾಗೂ ಭಾವಚಿತ್ರ ರಾರಾಜಿಸಲಿವೆ. ಜಿಲ್ಲೆಯ ಸಾರ್ವಜನಿಕ ಗಣೇಶ ಮಂಟಪಗಳಲ್ಲಿ ವಿಶೇಷವಾಗಿ ಸಾವರ್ಕರ್ ಭಾವಚಿತ್ರ ಹಾಕಲು ಶ್ರೀರಾಮ ಸೇನೆ ಕಾರ್ಯಕರ್ತರು ಮುಂದಾಗಿದ್ದಾರೆ. ಅಲ್ಲದೆ ಗಣೇಶೋತ್ಸವದಲ್ಲಿ ಸಾವರ್ಕರ್ ಅವರ ಸ್ವಾತಂತ್ರ್ಯ ಹೋರಾಟ, ತ್ಯಾಗ, ಬಲಿದಾನ, ಅವರು ಅನುಭವಿಸಿದ ಸಂಕಷ್ಟಗಳ ವೀಡಿಯೋಗಳನ್ನು ಪ್ರಸಾರ ಮಾಡಲು ಮುಂದಾಗಿವೆ. ಇದರ ಜೊತೆಗೆ ಸಾವರ್ಕರ್ ಚರಿತ್ರೆಯ ಪುಸ್ತಕ, ನಾಟಕ ಸೇರಿದಂತೆ ಇನ್ನು ಹಲವು ಕಾರ್ಯಕ್ರಮಗಳನ್ನು ಮಾಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಯುಪಿಐ ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸಲ್ಲ: ಕೇಂದ್ರ ಸರ್ಕಾರ
Advertisement
Live Tv
[brid partner=56869869 player=32851 video=960834 autoplay=true]