ಗದಗ: ನಗರದ ತೆಂಗಿನಕಾಯಿ ಬಜಾರ್ ನಲ್ಲಿ ಶ್ರೀವೀರಭದ್ರೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಭಕ್ತಾಧಿಗಳು ವಿವಿಧ ರೀತಿಯಲ್ಲಿ ಹರಕೆ ತೀರಿಸುವ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು. ಶ್ರೀ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆದ ಕಡುಬಿನ ಕಾಳಗದ ಅಂಗವಾಗಿ ಅಗ್ನಿಕುಂಡವನ್ನು ಸಿದ್ಧಗೊಳಿಸಲಾಗಿತ್ತು. ಉದ್ಯೋಗ, ಸಂತಾನ, ಆಸ್ತಿ, ಸಂಪತ್ತು ಹಾಗೂ ಆರೋಗ್ಯ ಸೇರಿದಂತೆ ಹಲಾವಾರು ಇಚ್ಟಾರ್ಥಗಳನ್ನು ಈಡೇರಿಸುವಂತೆ ಕೆಂಡತುಂಬಿದ ಅಗ್ನಿ ಕುಂಡದಲ್ಲಿ ಭಕ್ತಿಯಿಂದ ಅಗ್ನಿ ಕುಂಡ ಹಾಯ್ದು ಭಕ್ತರು ಹರಕೆ ತೀರಿಸಿದರು.
Advertisement
ಈ ವೇಳೆ ಮಹಿಳೆಯರು ಹಾಗೂ ಮಕ್ಕಳು ಅಗ್ನಿಕೊಂಡ ಹಾಯ್ದರು. ಅಲ್ಲದೆ ಪುರವಂತರ ನೇತೃತ್ವದಲ್ಲಿ ವಿಧಿವಿಧಾನದ ಮೂಲಕ ಹಿತ್ತಾಳೆ, ಕಬ್ಬಿಣದ ಸಲಾಕೆ ಹಾಗೂ ದಾರದ ಮೂಲಕ ಶಸ್ತ್ರ ಹಾಕಿಸಿಕೊಂಡರು. ಭಕ್ತರು ತಮ್ಮ ನಾಲಿಗೆ, ಕೆನ್ನೆ, ಕೈ ಭಾಗ ಸೇರಿದಂತೆ ದೇಹದ ವಿವಿಧ ಕಡೆಗಳಲ್ಲಿ ಶಸ್ತ್ರ ಚುಚ್ಚಿಕೊಂಡು ಭಕ್ತಿ ಪರಾಕಾಷ್ಠೆ ಮೆರೆದರು. ಗದಗ, ಬೆಟಗೇರಿ ಹಾಗೂ ಸುತ್ತಮುತ್ತಲಿನ ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.