ಮಂಗಳೂರು: ಜೆಡಿಎಸ್ (JDS) ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ (Chikkaballapur) ಸ್ಪರ್ಧೆ ಮಾಡುತ್ತೇನೆ. ಬಿ.ಕೆ.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ. ಅವರಿಗೆ ನೊಟೀಸ್ ಕೊಟ್ಟು ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ ಎಂದರು.
Advertisement
Advertisement
ಮೂರು ಡಿಸಿಎಂ (DCM) ಪಕ್ಷದ ಅಭಿಪ್ರಾಯ ಅಲ್ಲ, ಕೆಲವರ ವೈಯಕ್ತಿಕ ಅಭಿಪ್ರಾಯ. ನಮ್ಮ ಪಕ್ಷ ಬಲಿಷ್ಠವಾಗಿದೆ, ಅದರೆ ಕೆಲವರು ಪಕ್ಷ ಗಟ್ಟಿ ಮಾಡಲು ಹೇಳುತ್ತಾರೆ. ಅವರ ಸಲಹೆ ಸೂಚನೆಗಳನ್ನೂ ನಾವು ಕೇಳುತ್ತೇವೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಆದರೆ ಸದ್ಯಕ್ಕೆ ಮೂರು ಡಿಸಿಎಂ ಚರ್ಚೆ ಇಲ್ಲ ಎಂದು ತಿಳಿಸಿದರು.
Advertisement
Advertisement
ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ವಿಚಾರದ ಕುರಿತು ಮಾತನಾಡಿ, ಒಂದು ಮಳೆ ಬಂದರೆ ಕಾವೇರಿ ವಿಚಾರ ತಣ್ಣಗಾಗುತ್ತೆ. ಈಗ ನಮ್ಮ ಸರ್ಕಾರ ಇರುವಾಗ ವಿರೋಧ ಮಾಡಲು ಆಗಲ್ಲ. ನಮ್ಮ ಸರ್ಕಾರ ಕೋರ್ಟ್ ಮೂಲಕ ಸಮಸ್ಯೆ ಸರಿ ಮಾಡಲು ಯತ್ನಿಸ್ತಿದೆ. ಬಿಜೆಪಿಯವರು (BJP) ಈಗ ವಿರೋಧ ಪಕ್ಷದಲ್ಲಿ ಇದ್ದು ವಿರೋಧಿಸ್ತಾ ಇದ್ದಾರೆ. ನಮ್ಮ ಸರ್ಕಾರ ಈ ರಾಜ್ಯದ ಜನರ ಪರವಾಗಿಯೇ ಕೆಲಸ ಮಾಡಲಿದೆ. ಕರ್ನಾಟಕ ಕಾವೇರಿ ವಿಚಾರದಲ್ಲಿ ಸೋಲಲು ಅನೇಕ ಕಾರಣಗಳಿವೆ ಎಂದರು.
ನಾವು ಕಾವೇರಿ ನೀರನ್ನು ಗರಿಷ್ಠವಾಗಿ ಉಪಯೋಗ ಮಾಡಿಲ್ಲ. ಆ ಕಾಲದ ಆಡಳಿತಗಾರರು ಮಾಡಿದ ತಪ್ಪಿನಿಂದ ಹೀಗಾಗುತ್ತಿದೆ. ಯಗಚಿ ಅಣೆಕಟ್ಟು ಮಾಡೋದನ್ನೂ ಅನೇಕರು ತಡೆದಿದ್ದರು. ಇದರಿಂದ ನಮಗೆ ಸಿಗಬೇಕಾದ ನೀರಿನ ಪಾಲು ಸಿಗಲಿಲ್ಲ ಎಂದು ಹೇಳಿದರು.
Web Stories