ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ (DCM Post) ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾವು (Veerashaiva Mahasabha) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದೆ.
ಮುಂದಿನ ಲೋಕಸಭಾ ಚುನಾವಣೆಯನ್ನು (Lok Sabha Elections) ಗಮನದಲ್ಲಿಟ್ಟುಕೊಂಡು ಶೆಟ್ಟರ್ (Jagadish Shettar) ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಮಹಾಸಭಾದ ಹುಬ್ಬಳ್ಳಿ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಯಂಟ್ರಾವಿ, ಸಿಎಂಗೆ ಪತ್ರ ಬರೆದಿದ್ದಾರೆ. ಇದೇ ಮಂಜುನಾಥ್ ಈ ಹಿಂದೆ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆಲ್ಲಲಿದೆ ಎಂದು ರಕ್ತದಲ್ಲಿ ಪತ್ರ ಬರೆದಿದ್ದರು. ಇದನ್ನೂ ಓದಿ: ಸಂತ್ರಸ್ತ ಬಾಲಕಿ ದತ್ತು ಪಡೆಯಲು ಮುಂದಾದ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸ್ ಅಧಿಕಾರಿ
Advertisement
Advertisement
ಬಿಜೆಪಿಯಲ್ಲಿ ವೀರಶೈವ ಸಮಾಜವನ್ನು ಕಡೆಗಣಿಸಿದ್ದರಿಂದ ಜಗದೀಶ್ ಶೆಟ್ಟರ್ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಈಗ ಶೆಟ್ಟರ್ ಅವರ ಮೂಲಕ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಸಜ್ಜಾಗುತ್ತಿದ್ದಾರೆ. ಇದರಿಂದ ಲೋಕಸಭಾ ಚುನಾವಣೆಯಲ್ಲೂ ಗೆಲುವು ಸಾಧಿಸಬಹುದು. ಹಾಗಾಗಿ ವೀರಶೈವ ಸಮಾಜದ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮಂಜುನಾಥ್ ಯಂಟ್ರಾವಿ ಒತ್ತಾಯಿಸಿದ್ದಾರೆ.
Advertisement
Advertisement
ಸದ್ಯ ರಾಜ್ಯ ಕಾಂಗ್ರೆಸ್‌ನಲ್ಲಿ ಡಿಸಿಎಂ ಕೂಗಿನ ಬೆನ್ನಲ್ಲೇ ಲಿಂಗಾಯತ ಸಿಎಂ ಕೂಗು ಸಹ ಎದ್ದಿದೆ. ಲಿಂಗಾಯತ ಸಮುದಾಯಕ್ಕೂ ಡಿಸಿಎಂ ಹುದ್ದೆ ನೀಡಬೇಕು ಎಂಬ ಕೂಗು ಕಾಂಗ್ರೆಸ್ ನಾಯಕರಿಂದಲೇ ಈ ಹಿಂದೆ ಕೇಳಿ ಬಂದಿತ್ತು. ಈಗ ಡಿಸಿಎಂ ಆಗಿ ಏನು ಮಾಡಬೇಕು. ಆದರೆ ಸಿಎಂ ಆಗಬೇಕು ಎನ್ನುವ ಮೂಲಕ ಶಾಮನೂರು ಶಿವಶಂಕರಪ್ಪ ಲಿಂಗಾಯತ ಸಿಎಂ ಪರ ಧ್ವನಿ ಎತ್ತಿದ್ದಾರೆ. ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Asian Games 2023: ಎದುರಾಳಿ ಪಾಕ್ ವಿರುದ್ಧ ಭಾರತಕ್ಕೆ ಜಯ – ಸ್ಕ್ವಾಷ್‌ನಲ್ಲಿ ಚಿನ್ನದ ಬೇಟೆ
Web Stories