– ಸುರಕ್ಷಿತ ಕಾರ್ಯಾಚರಣೆಗೆ ಧರ್ಮಸ್ಥಳ ಮಂಜುನಾಥನಲ್ಲಿ ಪ್ರಾರ್ಥನೆ
ಮಂಗಳೂರು: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ (Indian Army) ಸರ್ವರೀತಿಯಲ್ಲೂ ಯಶಸ್ಸು ಕಾಣಲಿ ಎಂದು ಡಾ.ವೀರೇಂದ್ರ ಹೆಗ್ಗಡೆ (D Veerendra Heggade) ಧರ್ಮಸ್ಥಳ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಮ್ಮ ಹೆಮ್ಮೆಯ ಸೈನಿಕರಿಗೆ ಯಾವುದೇ ಹಾನಿಯಿಲ್ಲದೇ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸುವಂತೆ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ವೀರೇಂದ್ರ ಹೆಗ್ಗಡೆ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧ: ಜಮೀರ್ ಅಹ್ಮದ್
ಗುರುವಾರ ರಾತ್ರಿ ಪಾಕ್ ವಿರುದ್ಧ ಭಾರತ ಮಿಸೈಲ್‌ಗಳ ಮಳೆ ಸುರಿಸಿದೆ. ಈ ವೇಳೆ ಪಾಕ್ ಸಹ ದಾಳಿ ನಡೆಸಿದೆ. ಆದರೆ ಭಾರತೀಯ ಸೇನೆ ಆ ದಾಳಿಯನ್ನು ವಿಫಲಗೊಳಿಸಿದೆ. ಇದರ ಬೆನ್ನಲ್ಲೇ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಪಾಕ್ ತತ್ತರಿಸಿ ಹೋಗಿದೆ. ಇಷ್ಟಾಗಿಯೂ ಕಿತಾಪತಿ ಬಿಡದ ಪಾಕಿಸ್ತಾನ ಮತ್ತೆ ಭಾರತದ ಜಮ್ಮುವಿನ ಮೇಲೆ ದಾಳಿಗೆ ವಿಫಲಯತ್ನ ನಡೆಸಿದೆ. ಜಮ್ಮುವಿನಲ್ಲಿ ಇದುವರೆಗೆ ಪಾಕಿಸ್ತಾನದ 50ಕ್ಕೂ ಹೆಚ್ಚು ಡ್ರೋನ್ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಕೇಸ್ | NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿಗೆ ಪಾಕ್ ಸಂಪರ್ಕವಿದೆ: ಅಶೋಕ್