LatestLeading NewsMain PostNational

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

Advertisements

ನವದೆಹಲಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಗುರುವಾರ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.

ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿಟಿ ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು. ಇದನ್ನೂ ಓದಿ: ಯುಪಿ ಸರ್ಕಾರಕ್ಕೆ 600 ಕೋಟಿ ಆಸ್ತಿ ದಾನ ಮಾಡಿದ ವೈದ್ಯ

ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆಯಾಗಿರುವ ಡಾ. ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.  ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ

ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ, ವೀರೇಂದ್ರ ಹೆಗ್ಗಡೆ ಎಂಬ ಹೆಸರಿನ ನಾನು, ರಾಜ್ಯಸಭೆಯ ಸದಸ್ಯನಾಗಿ ನಾಮನಿರ್ದೇಶನ ಹೊಂದಿದವನಾಗಿ, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಕೈಗೊಳ್ಳಲಿರುವ ಕಾರ್ಯಗಳನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಪ್ರಮಾಣ ಮಾಡಿದರು.

ಪ್ರಹ್ಲಾದ್ ಜೋಶಿ ಸ್ವಾಗತ:
ವೀರೇಂದ್ರ ಹೆಗ್ಗಡೆಯವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅತ್ಯಂತ ಗೌರವಯುತವಾಗಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ಬರಮಾಡಿಕೊಂಡು, ಸನ್ಮಾನಿಸಿ ಅಭಿನಂದಿಸಿದರು.

ವೀರೇಂದ್ರ ಹೆಗ್ಗಡೆ ಕುರಿತು ಮಾತನಾಡಿದ ಜೋಶಿ, ನಮ್ಮ ಕರ್ನಾಟಕ ಹಾಗೂ ನಮ್ಮ ದೇಶದ ಹೆಮ್ಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದರು. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Live Tv

Leave a Reply

Your email address will not be published.

Back to top button