ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು (Dr. D.Veerendra Heggade) ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಿದ 14ನೇ ಬಜೆಟ್ (Budget) ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಹೆಗ್ಡೆಯವರು ಪತ್ರವನ್ನು ಬರೆದಿದ್ದಾರೆ.
ಪತ್ರದಲ್ಲೇನಿದೆ..?: ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಧರ್ಮಸ್ಥಳ (Dharmasthala) ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಕೆಂಪು ಸುಂದರಿ ಜಾಗಕ್ಕೆ ಹುಣಸೆ ಹಣ್ಣು ಎಂಟ್ರಿ- ಡಿಮ್ಯಾಂಡ್ ಬೆನ್ನಲ್ಲೇ ದರ ಏರಿಕೆ
ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಹೀಗಾಗಿ ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗುವಂತೆ ಹೆಗ್ಡೆಯವರು ಪತ್ರದಲ್ಲಿ ತಿಳಿಸಿದ್ದಾರೆ.
Web Stories