ಕಿಚ್ಚ ಸುದೀಪ್ ನಿನ್ನೆಯಷ್ಟೇ ಗೋಪೂಜೆ ನೆರವೇರಿಸಿ 31 ಗೋವುಗಳನ್ನು ದತ್ತು ಪಡೆದಿದ್ದರು. ಸುದೀಪ್ ಅವರ ಈ ಕೆಲಸದ ಪ್ರೇರಣೆಯಿಂದಾಗಿ ಯುವ ಉದ್ಯಮಿ, ಡಾ.ವಿಷ್ಣುಸೇನಾ ಸಮಿತಿಯ ಅಧ್ಯಕ್ಷರೂ ಆಗಿರುವ ವೀರಕಪುತ್ರ ಶ್ರೀನಿವಾಸ್ ಕೂಡ ಗೋವುಗಳನ್ನು ದತ್ತು ಪಡೆದಿದ್ದಾರೆ. ಅಲ್ಲದೇ, ಇತರರು ಈ ಕೆಲಸಕ್ಕೆ ಮುಂದಾಗಿ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Advertisement
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ ಹೇಳಿದ್ದಾರೆ. ನಿನ್ನೆ ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ವೈಷ್ಣವಿ ಜೊತೆಗಿನ ವಿದ್ಯಾಭರಣ್ ಫೋಟೋ ವೈರಲ್ ಬೆನ್ನಲ್ಲೇ ‘ರಹಸ್ಯ’ ನಟಿ ಗಂಭೀರ ಆರೋಪ!
Advertisement
Advertisement
ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದ್ದರು. ಈ ಮನವಿಯ ಬೆನ್ನಲ್ಲೇ ವೀರಕಪುತ್ರ ಅವರು ಐದು ಹಸುಗಳನ್ನು ದತ್ತು ಪಡೆದು ಮಾದರಿಯಾಗಿದ್ದಾರೆ.
Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದಿದ್ದಾರೆ. ಸಚಿವ ಪ್ರಭು ಚವ್ಹಾನ್ ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದಾರೆ.
ಜಾನುವಾರುಗಳ ದತ್ತು ಯೋಜನೆಯಡಿ ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳ ಪ್ರತಿ ಜಾನುವಾರಿಗೆ ವಾರ್ಷಿಕ ರೂ.11,000/- (ರೂಪಾಯಿ ಹನ್ನೊಂದು ಸಾವಿರ ಮಾತ್ರ)ಗಳು, ಜಾನುವಾರುಗಳಿಗಾಗಿ ಆಹಾರ ಪೂರೈಕೆಗೆ ಯೋಜನೆಯಡಿ ಸಾರ್ವಜನಿಕರು ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ (ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಇತ್ಯಾದಿ) ರಾಸುಗಳಿಗೆ ಒಂದು ದಿನಕ್ಕೆ ರೂ.70ಗಳು, ಗೋಶಾಲೆಗಳಿಗೆ ದೇಣಿಗೆ ಮತ್ತು ಗೋಶಾಲೆ ನಿರ್ವಹಣೆ ಯೋಜನೆಯಡಿ ಸಾರ್ವಜನಿಕರು ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳಿಗೆ ಕನಿಷ್ಠ ರೂ.10/- ಯಿಂದ ತಮ್ಮ ಶಕ್ತಾನುಸಾರ ಎಷ್ಟು ಬೇಕಾದರೂ ಮೂಲಭೂತ ಸೌಕರ್ಯ ಹಾಗೂ ಇತರೆ ವೆಚ್ಚಗಳಿಗಾಗಿ ದೇಣಿಗೆ ನೀಡಬಹುದು.