ಬೆಳಗಾವಿ: ಮೈಸೂರಿನಲ್ಲಿ (Mysuru) ನಡೆಯುವ ವಿಶ್ವ ರೈತ ಸಮಾವೇಶಕ್ಕೆ (World Farmers Conference) ತೆರಳುತ್ತಿದ್ದ ವಾಹನ ಪಲ್ಟಿಯಾಗಿ (Accident) 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬೈಲಹೊಂಗಲ (Bailhongal) ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಪರಿಣಾಮ ಸುಮಾರು 9ಕ್ಕೂ ಹೆಚ್ಚು ಜನರ ಕೈಕಾಲು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಬೈಲಹೊಂಗಲ ತಾಲೂಕಿನ ಗರಜೂರ ಗ್ರಾಮದ ರೈತರು, ಮಹಿಳೆಯರು ಸಮಾವೇಶಕ್ಕೆ ತೆರಳುವಾಗ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ | ಮನೆಗೆ ನುಗ್ಗಿ 7 ತಿಂಗಳ ಗರ್ಭಿಣಿಯನ್ನೇ ಕೊಂದ ತಂದೆ
ಗಾಯಾಳುಗಳನ್ನು ಬೆಳಗಾವಿ ಹಾಗೂ ಬೈಲಹೊಂಗಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶದವನೆಂದು ತಪ್ಪು ತಿಳಿದು ಕೇರಳದಲ್ಲಿ ಗುಂಪಿನಿಂದ ಭೀಕರ ಹಲ್ಲೆ – ವಲಸೆ ಕಾರ್ಮಿಕ ಸಾವು

