ಚಾಮರಾಜನಗರ: ಇಂದಿನಿಂದ ಚಾಮರಾಜನಗರ-ತಮಿಳುನಾಡು ಗಡಿ ಭಾಗ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಾತ್ರಿ ವೇಳೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ತಮಿಳುನಾಡಿನ ಸತ್ಯಮಂಗಲ ಹುಲಿಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ಹೆದ್ದಾರಿ ಇದಾಗಿದೆ. ಜಿಲ್ಲೆಯ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಸತ್ಯಮಂಗಲಂ ಹುಲಿಸಂರಕ್ಷಿತ ಪ್ರದೇಶ. ಮದ್ರಾಸ್ ಹೈಕೋರ್ಟ್ ನಿರ್ದೇಶನಕ್ಕೆ ಕರ್ನಾಟಕದ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮಹಿಳೆ ಬೆನ್ನ ಮೇಲೆ ಎಸ್‍ಪಿ ಸ್ಟಿಕ್ಕರ್ ಅಂಟಿಸಿದ ವೀಡಿಯೋ ವೈರಲ್ – ಮಹಿಳೆ ಹೇಳಿದ್ದೇನು?
ಇಂದು ಜಿಲ್ಲೆಯ ಗಡಿ ಭಾಗದ ಪುಣಜನೂರು ಚೆಕ್‌ಪೋಸ್ಟ್‌ನಲ್ಲಿ ರೈತರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ರಾತ್ರಿ ಸಂಚಾರ ನಿರ್ಬಂಧದಿಂದ ತರಕಾರಿ ಸಾಗಾಣಿಕೆಗೆ ತೊಂದರೆಯಾಗುವ ಹಿನ್ನೆಲೆ, ಚಾಮರಾಜನಗರ ಜಿಲ್ಲಾ ರೈತಸಂಘವು ಪ್ರತಿಭಟನೆ ನಡೆಸಲು ಮುಂದಾಗಿದೆ. ಇದನ್ನೂ ಓದಿ: ರಾಜ್ಯ ನಾಯಕರ ಮಧ್ಯೆ ರಮೇಶ್ ಜಾರಕಿಹೊಳಿ ಗುರುತಿಸಿದ ಅಮಿತ್ ಶಾ!
ಈ ನಡುವೆ ನಿರ್ಬಂಧ ಆದೇಶ ಜಾರಿಗೊಳಿಸುವ ಸಂಬಂಧ ನಿನ್ನೆ ಜಿಲ್ಲಾಧಿಕಾರಿಯೊಂದಿಗೆ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದರು. ಇಂದು ಈರೋಡ್ ಜಿಲ್ಲಾಡಳಿತದೊಂದಿಗೆ ಜಿಲ್ಲೆಯ ಅಧಿಕಾರಿಗಳ ಸಮನ್ವಯ ಸಭೆ ನಡೆಸುವ ಸಾಧ್ಯತೆ ಇದೆ. ಕಾರೇಪಾಳ್ಯ ಗಡಿಗಿಂತ ಮೊದಲು ಬಿಆರ್‍ಟಿ ಅರಣ್ಯ ಪ್ರದೇಶ ಇದೆ.
ಕರ್ನಾಟಕ ಗಡಿ ಭಾಗದಲ್ಲಿ ರಾತ್ರಿ ವಾಹನಗಳನ್ನು ನಿಲುಗಡೆ ಮಾಡುವುದರಿಂದ ಹಲವು ಸಮಸ್ಯೆಗಳು ಎದುರಾಗಲಿವೆ. ವನ್ಯಜೀವಿಗಳಿಗೆ ತೊಂದರೆ, ವಾಹನಗಳ ಮೇಲೆ ಕಾಡು ಪ್ರಾಣಿಗಳ ದಾಳಿ ಮಾಡುವ ಸಾಧ್ಯತೆ ಇದ್ದು, ಅರಣ್ಯ ಪ್ರದೇಶದಲ್ಲಿ ಅಕ್ರಮ ಚಟುವಟಿಕೆ ನಡೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಡಳಿತವು ಕರ್ನಾಟಕದ ಗಡಿಭಾಗದಲ್ಲಿ ವಾಹನಗಳನ್ನು ಎಲ್ಲಿ ನಿಲುಗಡೆ ಮಾಡಬೇಕೆಂಬ ಗೊಂದಲದಲ್ಲಿದೆ.
/p>