ಲಕ್ನೋ: ಕೇಂದ್ರ ಸಚಿವನ ಮಗ ಕಾರು ಹತ್ತಿಸಿದ ಪರಿಣಾಮ ಉತ್ತರಪ್ರದೇಶದಲ್ಲಿ ಪ್ರತಿಭಟನಾನಿರತ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಆ ಬಳಿಕ ನಡೆದ ಹಿಂಸಾಚಾರದಲ್ಲಿ ಆ ಕಾರಿನಲ್ಲಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ.
Advertisement
ಲಖೀಂಪುರ್‍ನಲ್ಲಿ ಉಪ ಮುಖ್ಯಮಂತ್ರಿ ಕೇಶವ್‍ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ನೀಡುವ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬೆಂಗಾವಲು ವಾಹನಗಳ ಸಾಲಿನಲ್ಲಿ ಬರುತ್ತಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾನ ಪುತ್ರ ಇದ್ದ ರೈತರ ಮೇಲೆ ಹರಿದು ನಾಲ್ವರು ರೈತರು ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಆ ಬಳಿಕ ಅಲ್ಲಿ ಪ್ರತಿಭಟನೆ ಉದ್ರಿಕ್ತಗೊಂಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದನ್ನೂ ಓದಿ: 20 ವರ್ಷ ಸೇನೆಯಲ್ಲಿ ಸೇವೆ- ನಿವೃತ್ತಿಯಾಗಿ ಹುಟ್ಟೂರಿಗೆ ಆಗಮಿಸಿದ ಸೈನಿಕ
Advertisement
Advertisement
ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ ಇಳಿಯಬೇಕಿದ್ದ ಹೆಲಿಪ್ಯಾಡ್‍ಗೂ ರೈತ ಸಂಘಟನೆಗಳು ಮುತ್ತಿಗೆ ಹಾಕಿದ್ದವು. ಕೃತ್ಯ ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ ಇವತ್ತು ದೇಶದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವಂತೆ ರೈತರಿಗೆ ಕರೆ ನೀಡಿವೆ. ಇತ್ತ ಲಖೀಂಪುರ್‍ಗೆ ಹೊರಟ್ಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ತಡೆ ಹಾಕಲಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ರೇಂಜ್‍ರೋವರ್ ಚಾಲನೆ – ನಿಂತಿದ್ದ ವ್ಯಕ್ತಿ ಸಾವು
Advertisement
Congress General Secretary Priyanka Gandhi Vadra left for Lakhimpur; earlier visuals from Lucknow pic.twitter.com/5jlWetJftU
— ANI UP/Uttarakhand (@ANINewsUP) October 3, 2021
ನನ್ನ ಮಗ ಕಾರಿನಲ್ಲಿ ಇರಲಿಲ್ಲ. ರೈತರು ಪ್ರತಿಭಟನೆ ಮಾಡಬಹುದು ಎಂದು ಮೊದಲೇ ತಿಳಿದಿತ್ತು. ಆದರೆ ರೈತರ ಪ್ರತಿಭಟನೆಯಲ್ಲಿ ಸಮಾಜಘಾತುಕ ಶಕ್ತಿಗಳು ಸೇರಿಕೊಂಡು ಬಿಜೆಪಿ ಕಾರ್ಯಕರ್ತರಿದ್ದ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದರು ಎಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಹೇಳಿದ್ದಾರೆ. ಸಚಿವರ ಮಗನ ಮೇಲೆ ಎಫ್‍ಐಆರ್ ದಾಖಲಿಸಿ ಬಂಧಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ಇತ್ತ ಹಿಂಸಾಚಾರವನ್ನು ಖಂಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಕ್ರಮ ಮತ್ತು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಹೇಳಿದ್ದಾರೆ.