ಕಾರವಾರ: ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ (National Highway) 766(ಇ) ಅಗಲೀಕರಣ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನೆಲೆ ನವೆಂಬರ್ 1 ರಿಂದ ಮೇ 31ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಶಿರಸಿಯ (Sirsi) ಸಹಾಯಕ ಆಯುಕ್ತ ಆರ್.ದೇವರಾಜ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಅಗಲೀಕರಣಕ್ಕೆ (Highway Widening) ಆರ್.ಎನ್.ಎಸ್.ಕಂಪನಿಗೆ ಗುತ್ತಿಗೆ ನೀಡಲಾಗಿದೆ. 2020ರಲ್ಲೇ ಕಾಮಗಾರಿ ನಡೆಯುವ ಸ್ಥಳದಲ್ಲಿ ವಾಹನ ನಿರ್ಬಂಧಕ್ಕೆ ಅಂದಿನ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಇದೀಗ ಹೆದ್ದಾರಿ ಪ್ರಾಧಿಕಾರವು ಸಹ ಸಂಚಾರ ದಟ್ಟಣೆ ಕಡಿಮೆ ಮಾಡಿ ಕಾಮಗಾರಿ (Road Work) ಮುಗಿಸಲು ವಾಹನ ಸಂಚಾರ ನಿರ್ಬಂಧಿಸುವಂತೆ ಕೋರಿದೆ. ಈಗಾಗಲೇ ಅಗಲೀಕರಣದ 33 ಕಿಲೋಮೀಟರ್ ವ್ಯಾಪ್ತಿಯಲ್ಲಿ 26 ಕಿಲೋಮೀಟರ್‌ವರೆಗೂ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ವಾಹನಗಳಿಗೆ ನಿರ್ಬಂಧಿಸುತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ವಿಶ್ವಕಪ್ ಪಂದ್ಯಾವಳಿ; ನಮ್ಮ ಮೆಟ್ರೋದಿಂದ ವಿಶೇಷ ಟಿಕೆಟ್ ವ್ಯವಸ್ಥೆ
Advertisement
Advertisement
ಇನ್ನು ವಾಹನ ಸವಾರರಿಗೆ ಬದಲಿ ವ್ಯವಸ್ಥೆ ಕಲ್ಪಿಸಿದ್ದು, ಕುಮಟಾ-ದೊಡ್ಮನೆ-ಸಿದ್ದಾಪುರ-ಶಿರಸಿ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಹೊನ್ನಾವರ-ಮಾವಿನಗುಂಡಿ, ಸಿದ್ದಾಪುರ, ಶಿರಸಿ ಮಾರ್ಗದಲ್ಲಿ ಎಲ್ಲಾ ತರಹದ ವಾಹನಗಳಿಗೆ ಅವಕಾಶ ಮಾಡಿಕೊಟ್ಟಿದ್ದು, ಶಿರಸಿ-ಯಾಣ-ವಡ್ಡಿ-ಕುಮಟಾ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಇದನ್ನೂ ಓದಿ: ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶಕ್ಕೆ ಒಂದು ತಿಂಗಳ ಕಾಲ ನಿರ್ಬಂಧ
Advertisement
Advertisement
ಶಿರಸಿಯಿಂದ ಯಲ್ಲಾಪುರ ಮಾರ್ಗವಾಗಿ ಅಂಕೋಲಾ ಮಾರ್ಗದಲ್ಲಿ ಎಲ್ಲಾ ತರಹದ ಭಾರಿ ವಾಹನಗಳ ಸಹಿತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಘಟ್ಟ ಭಾಗದ ಯಾಣ ಮತ್ತು ದೊಡ್ಮನೆ ಮಾರ್ಗದಲ್ಲಿ ಲಘು ವಾಹನಕ್ಕೆ ಮಾತ್ರ ಅವಕಾಶ ನೀಡಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಿಂದ ಒಂದು ಸಾವಿರ ಕೋಟಿ ಲಂಚ ಸಂಗ್ರಹ: ಎನ್.ರವಿಕುಮಾರ್
Web Stories