LatestLeading NewsMain PostNational

ಇದು ಸೇಡಿನ ರಾಜಕಾರಣ: ಬಿಜೆಪಿ ಮುಖಂಡನ ಬಂಧನಕ್ಕೆ ನವಜೋತ್‌ ಸಿಧು ಕಿಡಿ

ಚಂಡೀಗಢ: ಬಿಜೆಪಿ ಮುಖಂಡನನ್ನು ದೆಹಲಿಯಲ್ಲಿ ಪಂಜಾಬ್‌ ಪೊಲೀಸರು ಬಂಧಿಸಿರುವುದರ ವಿರುದ್ಧ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಕಿಡಿಕಾರಿದ್ದಾರೆ. ಇದು ಸೇಡಿನ ರಾಜಕಾರಣ ಎಂದು ಎಎಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಂಜಾಬ್‌ ಪೊಲೀಸರು ಬಿಜೆಪಿ ಮುಖಂಡ ತಜೀಂದರ್‌ ಪಾಲ್‌ ಸಿಂಗ್‌ ಬಗ್ಗಾ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕ ಸಿಧು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕನನ್ನು ದೆಹಲಿ ಪೊಲೀಸರಿಗೆ ಮಾತ್ರ ಹಸ್ತಾಂತರಿಸುತ್ತೇವೆ: ಹರಿಯಾಣ ಗೃಹ ಸಚಿವ

ಈ ಕುರಿತು ಟ್ವೀಟ್‌ ಮಾಡಿರುವ ಸಿಧು, ತಜೀಂದರ್ ಬಗ್ಗಾ ಬೇರೆ ಪಕ್ಷದವರಾಗಿರಬಹುದು, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್‌ ಮಾನ್ ಅವರು ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಪಂಜಾಬ್‌ ಪೊಲೀಸರನ್ನು ಬಳಸಿಕೊಳ್ಳುವುದು ಮಹಾಪಾಪ. ಪಂಜಾಬ್ ಪೋಲೀಸರನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಿ ಎಂದು ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವರು ಮನೆಗೆ ಬಂದು ನನ್ನ ಮಗನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಬಗ್ಗಾ ಅವರ ತಂದೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರನ್ನು ಆಧರಿಸಿ ದೆಹಲಿ ಪೊಲೀಸರು ಕಿಡ್ನಾಪ್‌ ಕೇಸ್‌ ದಾಖಲಿಸಿದ್ದರು. ಇದನ್ನೂ ಓದಿ: ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್

Bhagwant Mann

ಬಗ್ಗಾ ಅವರನ್ನು ಪಂಜಾಬ್‌ಗೆ ಕರೆತರಲಾಗುತ್ತಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪಂಜಾಬ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದ ಬಗ್ಗಾರನ್ನು ದೆಹಲಿಯಿಂದ ಮೊಹಾಲಿಗೆ ಕರೆತರುತ್ತಿದ್ದ ವಾಹನಗಳನ್ನು ಹರಿಯಾಣದ ಕುರುಕ್ಷೇತ್ರದಲ್ಲಿ ತಡೆಹಿಡಿಯಲಾಗಿದೆ.

Leave a Reply

Your email address will not be published.

Back to top button