ಮುಂಬೈ: ಕೋಲ್ಕತ್ತಾ ನೈಟ್‌ರೈಡರ್ಸ್ (KKR) ತಂಡದ ಆಟಗಾರ ವೆಂಕಟೇಶ್ ಅಯ್ಯರ್ (Venkatesh Iyer) 16ನೇ ಆವೃತ್ತಿಯ ಐಪಿಎಲ್‌ನಲ್ಲಿ (IPL 2023) ವೇಗದ ಶತಕ ಸಿಡಿಸಿ ವಿಶೇಷ ಸಾಧನೆ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಕೆಕೆಆರ್ ವಿರುದ್ಧ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಹ್ಯಾರಿ ಬ್ರೂಕ್ 55 ಎಸೆತಗಳಲ್ಲಿ ಚೊಚ್ಚಲ ಶತಕ ಸಿಡಿಸಿ ಸಾಧನೆ ಮಾಡಿದ್ದರು. ಇಂದು (ಏಪ್ರಿಲ್ 16) ವೆಂಕಟೇಶ್ ಅಯ್ಯರ್ 49 ಎಸೆತಗಳಲ್ಲೇ ಭರ್ಜರಿ 100 ರನ್ ಬಾರಿಸಿದರು. 9 ಸಿಕ್ಸರ್ ಹಾಗೂ 5 ಬೌಂಡರಿಗಳೂ ಇದರಲ್ಲಿ ಸೇರಿವೆ. ಒಟ್ಟಾರೆ ಈ ಪಂದ್ಯದಲ್ಲಿ ವೆಂಕಟೇಶ್ 51 ಎಸೆತಗಳಲ್ಲಿ 104 (6 ಬೌಂಡರಿ, 9 ಸಿಕ್ಸರ್) ಚಚ್ಚಿದರು. ಇದನ್ನೂ ಓದಿ: IPL 2023: ಡೆಲ್ಲಿಗೆ ಸತತ 5ನೇ ಸೋಲು – ತವರಿನಲ್ಲಿ RCBಗೆ 23 ರನ್‌ಗಳ ಭರ್ಜರಿ ಜಯ
ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು. ಮೊದಲ 23 ಎಸೆತಗಳಲ್ಲಿ 50 ರನ್ ಗಳಿಸಿದ್ದ ವೆಂಕಟೇಶ್ ಅಯ್ಯರ್, ಕೊನೆಯಲ್ಲಿ ನಿಧಾನಗತಿಯ ಬ್ಯಾಟಿಂಗ್‌ನಿಂದ ಮುಂದಿನ 26 ಎಸೆತಗಳಲ್ಲಿ 50 ರನ್ ಗಳಿಸಿ ಶತಕ ಪೂರೈಸಿದರು. ಇದನ್ನೂ ಓದಿ: ಐಪಿಎಲ್‌ನಲ್ಲಿ ಮೊದಲ ಶತಕ – ಕೋಲ್ಕತ್ತಾ ಬೌಲರ್‌ಗಳನ್ನು ಚೆಂಡಾಡಿದ ಬ್ರೂಕ್
ರನ್ ಏರಿದ್ದು ಹೇಗೆ?
50 ರನ್ 30 ಎಸೆತ
100 ರನ್ 64 ಎಸೆತ
150 ರನ್ 99 ಎಸೆತ
185 ರನ್ 120 ಎಸೆತ