ಚಾಮರಾಜನಗರ: ಕಬಿನಿ ಮತ್ತು ಕೆಆರ್‍ಎಸ್ ನಿಂದ ಅಧಿಕ ಪ್ರಮಾಣದ ನೀರು ಹರಿಸಿರುವುದರಿಂದ ಹೊಗೆನಕಲ್ ಫಾಲ್ಸ್ ರಮಣೀಯವಾಗಿ ಗೋಚರಿಸುತ್ತಿದೆ.
ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗಡಿಯಲ್ಲಿರುವ ಹೊಗೆನಕಲ್ ಪ್ರದೇಶದಲ್ಲಿ ಎಲ್ಲಿ ನೋಡಿದರು ಬಂಡೆಗಳನ್ನು ಸೀಳಿಕೊಂಡು ಬರುವ ನೀರು ಗೋಚರವಾಗುತ್ತಿದೆ. ಆದರೆ ಈ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರಿಗೆ ಮಾತ್ರ ಅವಕಾಶವಿಲ್ಲ.
Advertisement
ಅಧಿಕ ಪ್ರಮಾಣದಲ್ಲಿ ಇಲ್ಲಿ ನೀರು ಹರಿಯುತ್ತಿರುದರಿಂದ ಯಾವುದೇ ರೀತಿಯ ಅವಘಡಗಳು ಜರುಗಬಾರದೆಂದು ನೀರಿನ ರಭಸ ಕಡಿಮೆ ಆಗುವವರೆಗೂ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಸದ್ಯ ಹೊಗೆನಕಲ್ ಪ್ರದೇಶ 1.40 ಲಕ್ಷ ಕ್ಯೂಸೆಕ್ ನೀರಿನಿಂದ ಮುಳುಗಡೆಯಾಗಿದೆ.
Advertisement
Advertisement
ಕಬಿನಿ ಹಾಗೂ ಕೆಆರ್ ಎಸ್ ಜಲಾಶಯಗಳಿಂದ ಅಧಿಕ ನೀರು ಹರಿಸಿರುವ ಹಿನ್ನೆಲೆಯಲ್ಲಿ ನದಿ ಅಪಾಯ ಮಟ್ಟಿ ಮೀರಿ ಹರಿಯುತ್ತಿವೆ. ಕಬಿನಿ ಜಲಾಶಯದಿಂದ 80 ಸಾವಿರ ಕ್ಯೂಸೆಕ್ ನೀರು ಹೊರ ನೀಡುತ್ತಿರುವ ಕಾರಣ ಎಲ್ಲೆಡೆ ಜಲಪ್ರವಾಹ ಉಂಟಾಗಿದೆ.
Advertisement
ಕೇರಳ, ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಮೇಲೆ ಕಪಿಲಾ ನದಿ ಉಕ್ಕಿ ಹರಿಯುತ್ತಿದೆ. ಕಳೆದ ಮೂರು ದಿನಗಳಿಂದ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತವಾಗಿದೆ. ಹೆದ್ದಾರಿ ಸಂಪರ್ಕ ಕಡಿತದಿಂದ ವಾಹನ ಸವಾರರ ಪರದಾಡುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews