LatestMain PostNational

ಗಾಂಧಿ ಕುಟುಂಬಕ್ಕೆ ಕ್ಷಮೆ ಕೋರುವೆ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ನಳಿನಿ ಶ್ರೀಹರನ್ (Nalini Sriharan), ಸ್ಫೋಟದಲ್ಲಿ ಸಾವನ್ನಪ್ಪಿದವರ ಹಾಗೂ ಗಾಂಧಿ ಕುಟುಂಬಕ್ಕೆ ಕ್ಷಮೆ ಕೇಳಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳನ್ನು 31 ವರ್ಷಗಳ ನಂತರ ಬಿಡುಗಡೆ ಮಡಲಾಗಿತ್ತು. ಈ ವೇಳೆ ಮಾತನಾಡಿದ ನಳಿನಿ ಶ್ರೀಹರನ್, ನಾನು ಸ್ಫೋಟದಲ್ಲಿ ಸಾವನ್ನಪ್ಪಿದವರ ಬಗ್ಗೆ ತುಂಬಾ ವಿಷಾದವಿದೆ. ನಾವು ಘಟನೆಯ ಬಗ್ಗೆ ಯೋಚಿಸುತ್ತಾ ಹಲವು ವರ್ಷಗಳನ್ನು ಕಳೆದಿದ್ದೇವೆ. ಆ ಕುಟುಂಬದವರ ಬಳಿ ಕ್ಷಮೆಯಾಚಿಸುತ್ತೇನೆ ಎಂದರು.

ಸ್ಫೋಟದಲ್ಲಿ ಅನೇಕರು ತಮ್ಮ ಆತ್ಮೀಯರನ್ನು ಕಳೆದುಕೊಂಡಿದ್ದಾರೆ. ಅವರೆಲ್ಲರೂ ಒಮ್ಮೆಯಾದರೂ ಆ ದುರಂತದಿಂದ ಯಾವುದೇ ಸಮಯದಲ್ಲಾದರೂ ಹೊರಬರುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.

ರಾಜೀವ್ ಗಾಂಧಿಯವರ ಕುಟುಂಬವನ್ನು ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ನನ್ನನ್ನು ಭೇಟಿ ಮಾಡುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಅವರು ನನ್ನನ್ನು ನೋಡುವ ಸಮಯ ಕಳೆದಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ನಳಿನಿ ಅವರಲ್ಲದೆ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ಆರ್ಪಿ ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು. ಅಪರಾಧಿಗಳು ತೃಪ್ತಿದಾಯಕ ನಡವಳಿಕೆ ತೋರಿದ್ದಾರೆ. ಪದವಿಗಳನ್ನು ಪಡೆದಿದ್ದು, ಪುಸ್ತಕಗಳನ್ನು ಬರೆದಿದ್ದಾರೆ. ಸಮಾಜ ಸೇವೆಯಲ್ಲಿ ಭಾಗವಹಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ: ರಾಜೀವ್‌ ಗಾಂಧಿ ಹತ್ಯೆ ಕೇಸ್‌ – 30 ವರ್ಷಗಳ ನಂತರ ನಳಿನಿ ಶ್ರೀಹರನ್‌ ಸೇರಿ 3 ಅಪರಾಧಿಗಳು ರಿಲೀಸ್‌

ಮೇ ತಿಂಗಳಲ್ಲಿ, ಏಳನೇ ಅಪರಾಧಿ ಪೆರಾರಿವಾಲನ್‍ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ (Supreme Court)  ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತ್ತು. ಅದೇ ಆದೇಶವು ಉಳಿದ ಅಪರಾಧಿಗಳಿಗೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಕ್ಯಾಬಿನೆಟ್ 2018 ರಲ್ಲಿ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ರಾಜ್ಯಪಾಲರು ಬದ್ಧರಾಗಿದ್ದಾರೆ ಎಂದು ನ್ಯಾಯಾಲಯ ಗಮನಿಸಿತ್ತು. ಇದನ್ನೂ ಓದಿ: ದ್ರೌಪದಿ ಮುರ್ಮು ನೋಡಲು ಹೇಗಿದ್ದಾರೆ ಗೊತ್ತಲ್ಲ- ವಿವಾದವಾಗ್ತಿದ್ದಂತೆ ಟಿಎಂಸಿ ಸಚಿವ ಕ್ಷಮೆ

Live Tv

Leave a Reply

Your email address will not be published. Required fields are marked *

Back to top button