ಕನ್ನಡದ ಖ್ಯಾತ ನಟ ಅನಂತ್ ನಾಗ್ ಅವರಿಗೆ ಇಂದು (ಮೇ 27) ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಪದ್ಮಭೂಷಣ ಪ್ರಶಸ್ತಿ (Padma Bhushan Award 2025) ಪ್ರದಾನ ಮಾಡಿದರು.
ಶ್ರೀ ಅನಂತ್ ನಾಗ್ ಅವರು ಕನ್ನಡ ಚಲನಚಿತ್ರ ರಂಗದ ಹಿರಿಯ ನಟರಾಗಿದ್ದು, ಕಳೆದ 5 ದಶಕಗಳಲ್ಲಿ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗೆ ಮತ್ತು ತಮ್ಮ ಬಹುಮುಖ ಪ್ರತಿಭೆಗೆ ಹೆಸರುವಾಸಿಯಾಗಿದ್ದಾರೆ. ಇದನ್ನೂ ಓದಿ:ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
ಹಲವು ವರ್ಷಗಳಿಂದ ಅನಂತ್ ನಾಗ್ಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂದು ಕನ್ನಡಿಗರು ಆಶಿಸಿದ್ದರು. ಇದೀಗ ಹಿರಿಯ ನಟನಿಗೆ ಸಿಕ್ಕಿರುವ ಪ್ರಶಸ್ತಿಗೆ ಅಭಿಮಾನಿಗಳು ಶುಭಹಾರೈಸಿದ್ದಾರೆ.
ಅನಂತ್ ನಾಗ್ ಅವರು ಕನ್ನಡ, ಹಿಂದಿ, ಮರಾಠಿ ಸೇರಿದಂತೆ 300ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಾರೆ. ರಂಗಭೂಮಿಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.