ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ
90 ವರ್ಷದ ಲೋಕನಾಥ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದು, 5 ದಶಕಗಳ ಕಾಲ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಲೋಕನಾಥ್ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Advertisement
Advertisement
ಮಧ್ಯಾಹ್ನ 12 ರಿಂದ 2.30ರವರೆಗೂ ಅಂತಿಮ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಭೂತಯ್ಯನ ಮಗ ಅಯ್ಯು, ನಾಗರಹಾವು, ಶರಪಂಜರ, ಮಿಂಚಿನ ಓಟ, ಬಂಗಾರದ ಪಂಜರ, ಕಾಕನಕೋಟೆ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಲೋಕನಾಥ್ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv