ವಯೋಸಹಜ ಅನಾರೋಗ್ಯದ ಕಾರಣದಿಂದಾಗಿ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ಅವರ ಮನೆಗೆ ನಟ ಶಿವರಾಜ್ ಕುಮಾರ್ (Shivaraj Kumar) ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ. ಪತ್ನಿ ಗೀತಾ (Geeta)ಅವರೊಂದಿಗೆ ಆಗಮಿಸಿದ್ದ ಶಿವಣ್ಣ, ಹಿರಿಯ ನಟಿಯ ಆರೋಗ್ಯದ ಕುರಿತು ವಿವರಣೆ ಪಡೆದುಕೊಂಡರು. ಲೀಲಾವತಿ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದರು.
ಮನೆಗೆ ಆಗಮಿಸಿದ್ದ ಶಿವರಾಜ್ ಕುಮಾರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ವಿನೋದ್ ರಾಜ್ (Vinod Raj), ಅಮ್ಮನ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಶಿವಣ್ಣ ಮತ್ತು ವಿನೋದ್ ರಾಜ್ ತಬ್ಬಿಕೊಂಡು ಭಾವುಕ ಕ್ಷಣಕ್ಕೆ ಸಾಕ್ಷಿಯಾದರು.
ಮೊನ್ನೆಯಷ್ಟೇ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದರು ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja), ದರ್ಶನ್. ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲವು ಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದರು.
ವಯಸ್ಸಿನ ಕಾರಣದಿಂದಾಗಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಗೆ ತೆರೆಳ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದೀಗ ಅರ್ಜುನ್ ಸರ್ಜಾ ಕೂಡ ಅದೇ ಕೆಲಸ ಮಾಡಿದ್ದಾರೆ. 87 ವರ್ಷದ ಹಿರಿಯ ನಟಿ ಲೀಲಾವತಿಯವರು ಆರೋಗ್ಯ ಸಮಸ್ಯೆಯಿಂದಾ ವಿಶ್ರಾಂತಿ ಪಡೆಯುತ್ತಿದ್ದಾರೆ.