ಹಿರಿಯನಟಿ ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ

Public TV
1 Min Read
Leelavati 3

ಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ (Leelavati) ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ ಮಾಡುವ ಕಾರ್ಯಕ್ರಮ ಇಂದು ನೆರವೇರಿತು.

Leelavati 2

ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಲಾವಿದರು ನಮ್ಮಮ್ಮ ಲೀಲಮ್ಮ ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ಪ್ರದಾನ ಮಾಡಿ ಹಿರಿಯ ಚೇತನವನ್ನು ಗೌರವಿಸಿದ್ದಾರೆ. ಐವತ್ತಕ್ಕೂ ಹೆಚ್ಚು ಕಲಾಬಳಗವೇ ಲೀಲಾವತಿ ಅವರ ಮನೆಗೆ ಆಗಮಿಸಿತ್ತು.  ಹಿರಿಯ ನಟರಾದ ಶ್ರೀಧರ್,  ದೊಡ್ಡಣ್ಣ, ಸುಂದರ್ ರಾಜ್,  ಜೈಜಗದೀಶ್, ಹಿರಿಯ ನಟಿಗಿರಿಜಾ ಲೋಕೇಶ್, ಪದ್ಮಾವಸಂತಿ, ಅಂಜಲಿ, ಭವ್ಯ, ನಿರ್ದೇಶಕ ಸಾಯಿಪ್ರಕಾಶ್, ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ನಟಿ ಪೂಜಾಗಾಂಧಿ (Pooja Gandhi), ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್ (B.M. Harish)ಹಾಗೂ ಮಂಡಳಿ ಸದಸ್ಯರು ಸೇರಿದಂತೆ 50ಕ್ಕೂ ಹೆಚ್ಚು ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್‌ಗೆ ಸ್ಟಾರ್ ನಟ ಕಮಲ್ ಹಾಸನ್ ವಿಲನ್

Leelavati 1

ಇದೇ ವೇಳೆ ನಟ ನಟಿಯರು ಲೀಲಾವತಿಯವರೊಂದಿಗೆ ಇದ್ದ ಒಡನಾಟವನ್ನು ಹಂಚಿಕೊಂಡರು. ನಟ ನಟಿಯರನ್ನು ಬರಮಾಡಿಕೊಂಡ ಲೀಲಾವತಿ ಅವರ ಮಗ ವಿನೋದ್ ರಾಜ್ (Vinod Raj) ಕಲಾವಿದರಿಗೆ ವಿಶೇಷ ಭೋಜನ ವ್ಯವಸ್ಥೆಯನ್ನು ಮಾಡಿದರು. ಲೀಲಾವತಿ ಅವರ ಸಿನಿಮಾಗಳ ಹಾಡುಗಳ, ನೃತ್ಯ ಕಾರ್ಯಕ್ರಮದ ಹೈಲೆಟ್ಸ್.

Share This Article