ದಕ್ಷಿಣ ಭಾರತದ ಖ್ಯಾತ ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ವಿದ್ಯಾಸಾಗರ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
Advertisement
ವಿದ್ಯಾಸಾಗರ್ ಅವರು ಕೆಲವು ವರ್ಷಗಳಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜನವರಿಯಲ್ಲಿ ಕುಟುಂಬ ಕೋವಿಡ್ 19 ಪರೀಕ್ಷೆ ನಡೆಸಿತ್ತು. ಈ ವೇಳೆ ಸೋಂಕು ಉಲ್ಬಣಗೊಂಡಿದ್ದರೂ ವಿದ್ಯಾಸಾಗರ್ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಆದರೆ ಸೋಂಕು ಮತ್ತೆ ಕಾಣಿಸಿಕೊಂಡಿದ್ದು, ಹೀಗಾಗಿ ಕೆಲವು ವಾರಗಳ ಹಿಂದೆ ವಿದ್ಯಾಸಾಗರ್ ಅವರಿಗೆ ಶ್ವಾಸಕೋಶದ ಸೋಂಕಿನ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಆದರೆ ಕಸಿ ಮಾಡಿಸಿಕೊಳ್ಳಲು ದಾನಿಗಳು ಸರಿಯಾಗಿ ಸಿಗಲಿಲ್ಲ ಎಂದು ತಿಳಿದುಬಂದಿದೆ.
Advertisement
Advertisement
ವೈದ್ಯರು ಔಷಧಿಗಳ ಮೂಲಕ ಪರಿಸ್ಥಿತಿಯನ್ನು ಗುಣಪಡಿಸಲು ಪ್ರಯತ್ನಿಸಿದ್ದರೂ ಯಾವುದೇ ಪ್ರಯೋಜನವಾಗದೇ ಅವರು ಮೃತಪಟ್ಟಿದ್ದಾರೆ. ವಿದ್ಯಾಸಾಗರ್ ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕ ಮಂದಿ ಸಂತಾಪ ಸೂಚಿಸುತ್ತಿದ್ದಾರೆ. ಇದನ್ನೂ ಓದಿ: ಈ ಬಾರಿ ಖಾಕಿ ಕಣ್ಗಾವಲಿನಲ್ಲಿ ಬಕ್ರೀದ್ ಆಚರಣೆ
Advertisement
2009ರಲ್ಲಿ ನಟಿ ಮೀನಾ ಅವರು ಬೆಂಗಳೂರು ಮೂಲದ ವಿದ್ಯಾಸಾಗರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ನೈನಿಕಾ ಎಂಬ ಮಗಳಿದ್ದಾಳೆ. ವಿದ್ಯಾ ಸಾಗರ್ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಮದುವೆಯ ನಂತರ ಈ ಜೋಡಿ ಚೆನ್ನೈನಲ್ಲಿ ನೆಲೆಸಿತ್ತು.