ಮುಂಬೈ: ಪಶ್ಚಿಮ ಘಟ್ಟಗಳ(Western Ghats) ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ (Ecologist), ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಬುಧವಾರ ರಾತ್ರಿ ಪುಣೆಯಲ್ಲಿ(Pune) ನಿಧನರಾದರು.
ಮಾಧವ ಗಾಡ್ಗೀಳ್(Madhav Gadgil) ಅವರು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಮಾಜಿ ಸದಸ್ಯರಾಗಿದ್ದರು ಮತ್ತು 2010 ರ ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿ (WGEEP) ಮುಖ್ಯಸ್ಥರಾಗಿದ್ದರು. ಇವರು ಅಧ್ಯಯನ ನಡೆಸಿ ತಯಾರಿಸಿದ್ದ ವರದಿಯನ್ನು ಗಾಡ್ಗೀಳ್ ಆಯೋಗದ ವರದಿ (Gadgil Commission Report) ಎಂದೇ ಕರೆಯಲಾಗುತ್ತಿತ್ತು.
1942 ರ ಮೇ 24 ರಂದು ಪುಣೆಯಲ್ಲಿ ಜನಿಸಿದ ಇವರು ಪುಣೆಯ ಫರ್ಗುಸನ್ ಕಾಲೇಜಿನಿಂದ ಬಿಎಸ್ಸಿ (ಪ್ರಾಣಿಶಾಸ್ತ್ರ) ಪದವಿ ಪಡೆದು 1965 ರಲ್ಲಿ ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪಡೆದು 1969 ರಲ್ಲಿ ಹಾರ್ವರ್ಡ್‌ನಿಂದ ಜೀವಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ಪಡೆದ್ದರು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಂಗನಕಾಯಿಲೆ ಪತ್ತೆ
Madhav Gadgil, the pre-eminent ecologist, has just passed away. He was a top-notch academic scientist, a tireless field researcher, a pioneering institution-builder, a great communicator, a firm believer in people’s networks and movements, and friend, philosopher, guide, and… pic.twitter.com/gJMOTdzuXw
— Jairam Ramesh (@Jairam_Ramesh) January 8, 2026
ಡಾ. ಗಾಡ್ಗೀಳ್ ಅವರು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (NCERT) ಸದಸ್ಯರಾಗಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (NTCA) ಸದಸ್ಯರಾಗಿ ಮತ್ತು ರಾಷ್ಟ್ರೀಯ ಸಲಹಾ ಮಂಡಳಿಯ (NAC) ದಸ್ಯರಾಗಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಕ್ರೀಡಾ ಪಟುವಾಗಿದ್ದ ಮಾಧವ ಗಾಡ್ಗೀಳ್ 1959 ಮತ್ತು 1961 ರಲ್ಲಿ ಮಹಾರಾಷ್ಟ್ರ ರಾಜ್ಯ ಜ್ಯೂ ನಿಯರ್ ಮತ್ತು ಪುಣೆ ವಿಶ್ವವಿದ್ಯಾಲಯದ ಹೈಜಂಪ್‌ನಲ್ಲಿ ದಾಖಲೆ ನಿರ್ಮಿಸಿದ್ದರು. ಅವರು ಅಖಿಲ ಭಾರತ ವಿಶ್ವವಿದ್ಯಾಲಯದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪುಣೆ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದರು.

