Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ – ಹೆಚ್‌ಡಿಡಿ, ಸಿದ್ರಾಮಯ್ಯ ಸೇರಿ ಗಣ್ಯರಿಂದ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ – ಹೆಚ್‌ಡಿಡಿ, ಸಿದ್ರಾಮಯ್ಯ ಸೇರಿ ಗಣ್ಯರಿಂದ ಸಂತಾಪ

Bengaluru City

ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ – ಹೆಚ್‌ಡಿಡಿ, ಸಿದ್ರಾಮಯ್ಯ ಸೇರಿ ಗಣ್ಯರಿಂದ ಸಂತಾಪ

Public TV
Last updated: February 11, 2026 7:47 am
Public TV
Share
3 Min Read
P Ramiah
SHARE

ಬೆಂಗಳೂರು: ಹಿರಿಯ ಪತ್ರಕರ್ತರು ಹಾಗೂ ಮಾಜಿ ಎಂಎಲ್‌ಸಿ ಆದ ಪಿ ರಾಮಯ್ಯ (93) (P Ramiah) ಅವರು ನಿಧನರಾಗಿದ್ದಾರೆ.

ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ. ಬಾಲಜಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ವಿದ್ಯುತ್‌ ಸ್ವಾವಲಂಬನೆಗೆ ಥೋರಿಯಂ ಆಧಾರಿತ ಪರಮಾಣು ವಿದ್ಯುತ್ ಕೇಂದ್ರಗಳು ಏಕೆ ಮುಖ್ಯ?

ನಾಡಿನ ಹಿರಿಯ ಪತ್ರಕರ್ತರು, ನನ್ನ ಚಿರಕಾಲದ ಮಿತ್ರರು, ಹಿತೈಷಿಗಳು ಆಗಿದ್ದ ಶ್ರೀ ಪಿ. ರಾಮಯ್ಯನವರು ನಿಧನರಾದ ಸುದ್ದಿ ತಿಳಿದು ಬಹಳ ನೋವುಂಟಾಯಿತು. The Hindu ಪತ್ರಿಕೆಯ ವರದಿಗಾರರಾಗಿ ಅಷ್ಟೇ ಅಲ್ಲದೆ, ಆತ್ಮೀಯ ಒಡನಾಡಿಯಾಗಿ ದಶಕಗಳ ಕಾಲದಿಂದಲೂ ನನಗೆ ಚಿರಪರಿಚಿತರು. 1/2 pic.twitter.com/G0fXB24EOW

— H D Devegowda (@H_D_Devegowda) February 10, 2026

ಪಿ. ರಾಮಯ್ಯ ಅವರ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ, ಆದಿಚುಂಚನಗಿರಿ ಮಠಾಧ್ಯಕ್ಷರಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಹೊಸ ‘ಸ್ಟ್ರಿಕ್ಟ್ ಅಕೌಂಟ್ ಸೆಟ್ಟಿಂಗ್ಸ್’ ಪರಿಚಯಿಸಿದ ವಾಟ್ಸಾಪ್​ – ಅಪ್ಲಿಕೇಶನ್ ಬಳಕೆಗೆ ಹಣ ಪಾವತಿಸ್ಬೇಕಾ?

Deeply saddened by the news of the passing of Shri P. Ramaiyya avaru, former Member of the Legislative Council and a towering figure in Karnataka journalism, my mentor and a fatherly presence in my life.

A distinguished embodiment of humane, honest and value-driven journalism,… pic.twitter.com/wVsnCtDoqt

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) February 10, 2026

1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ ಅವರು ʻದಿ ಹಿಂದೂʼ ಪತ್ರಿಕೆಯಲ್ಲಿ 5 ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. ವಿಧಾನ ಪರಿಷತ್ತಿನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಅವರಿಗೆ ಇಬ್ಬರು ಪುತ್ರರು, ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು, ಅಪಾರ ಬಂಧು ಬಳಗ ಇದ್ದಾರೆ. ಅವರ ಪಾರ್ಥಿವ ಶರೀರವನ್ನ ಸಾರ್ವಜನಿಕ ದರ್ಶನಕ್ಕಾಗಿ ಬುಧವಾರ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/1 7 ನೇ ಮೇನ್ 16 ನೇ ಕ್ರಾಸ್ ಇಡಲಾಗುವುದು ಎಂದು ಅವರ ಸೋದರಳಿಯ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕರಾಗಿರುವ ಗಿರೀಶ್ ಲಿಂಗಣ್ಣ ಅವರು ಮಾಹಿತಿ ನೀಡಿದ್ದಾರೆ.

ಸಂದ ಪ್ರಶಸ್ತಿಗಳು
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ,ಮಾಧ್ಯಮ ಅಕಾಡೆಮಿ ಪ್ರಶಸ್ತಿ , ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಇದನ್ನೂ ಓದಿ: ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರ ನಿಧನದಿಂದ ದು:ಖಿತನಾಗಿದ್ದೇನೆ.

‘ದಿ ಹಿಂದೂ’ ಪತ್ರಿಕೆಯಲ್ಲಿ ಐದು ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು ನನ್ನ ಹಿತಚಿಂತಕರಾಗಿದ್ದರು. ಪತ್ರಕರ್ತರಾಗಿ ಸದಾ ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದ ರಾಮಯ್ಯ ಅವರಲ್ಲಿದ್ದ ರಾಜಕೀಯ, ಇತಿಹಾಸ,… pic.twitter.com/LIT03xDZ3r

— Siddaramaiah (@siddaramaiah) February 10, 2026

ಪತ್ರಿಕೋದ್ಯಮಕ್ಕೆ ಕೊಡುಗೆ
ಪಿ. ರಾಮಯ್ಯ (ಹಿಂದೂ ರಾಮಯ್ಯ) ಅವರು ಕರ್ನಾಟಕದ ಪ್ರಸಿದ್ಧ ಹಿರಿಯ ಪತ್ರಕರ್ತರು, ಇವರು ಸುಮಾರು 45 ವರ್ಷಗಳ ಕಾಲ The Hindu ಪತ್ರಿಕೆಯ ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಸತ್ಯ ಮತ್ತು ಪ್ರಾಮಾಣಿಕತೆಗೆ ಬದ್ಧರಾಗಿದ್ದ ಇವರನ್ನು ‘ಪತ್ರಿಕೋದ್ಯಮದ ತಪಸ್ವಿ’ ಎಂದು ಕರೆಯಲಾಗುತ್ತದೆ. ಇವರ ಅನುಭವ ಕಥನ “ನಾನು ಹಿಂದೂ ರಾಮಯ್ಯ” ಕೃತಿಯು ಇವರ ಬದ್ಧತೆಯನ್ನು ಎತ್ತಿಹಿಡಿಯುತ್ತದೆ. ಪಿ. ರಾಮಯ್ಯನವರು ತಮ್ಮ ವೃತ್ತಿ ಜೀವನದಲ್ಲಿ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿನ ಸಂಪರ್ಕಗಳನ್ನು ಬಳಸಿ, ಸರ್ಕಾರದ ನೀತಿ ನಿರೂಪಣೆಗೆ ಕೊಡುಗೆ ನೀಡಿದ್ದರು.

TAGGED:bengaluruHD DevegowdajournalistP Ramiahsiddaramaiahಪಿ. ರಾಮಯ್ಯಬೆಂಗಳೂರುಸಿದ್ದರಾಮಯ್ಯಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
4 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
39 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
59 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?