ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ (59) (Vasanth Nadiger) ಸೋಮವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ್ ನಾಡಿಗೇರ್ ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಇದನ್ನೂ ಓದಿ: ಹಳಿ ಮೇಲಿದ್ದ ಸಿಲಿಂಡರ್‌ಗೆ ಗುದ್ದಿದ ರೈಲು – ಕಾನ್ಪುರದಲ್ಲಿ ರೈಲು ದುರಂತಕ್ಕೆ ಸಂಚು!
Advertisement
ಇವರು ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರಿನವರು. ಪ್ರಾಥಮಿಕ, ಪ್ರೌಢ ಶಿಕ್ಷಣ ಪಡೆದು ಧಾರವಾಡದಲ್ಲಿ ಬಿಎಸ್‌ಸಿ, ಎಂಎಸ್‌ಸಿ ಪದವಿ ಪಡೆದರು. ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟಕದಿಂದ ವೃತ್ತಿ ಜೀವನ ಆರಂಭಿಸಿದ ಅವರು ಕನ್ನಡಪ್ರಭ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್ ವಿಚಾರಣೆ – ಇಡೀ ದಿನ ಸಿಎಂ ಕಾರ್ಯಕ್ರಮ ರಿಸರ್ವ್
Advertisement
ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ.
ಮೃತರ ಆತ್ಮಕ್ಕೆ ಶಾಂತಿ… pic.twitter.com/QZ49ZQGefo
— CM of Karnataka (@CMofKarnataka) September 9, 2024
Advertisement
ವಸಂತ ನಾಡಿಗೇರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಅನೇಕ ಗಣ್ಯರು, ನಾಡಿನ ಹಿರಿಯ ಪತ್ರಕರ್ತರು, ಸಾಹಿತಿಗಳು ಕಂಬನಿ ಮಿಡಿದಿದ್ದಾರೆ. ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
Advertisement
ಹಿರಿಯ ಪತ್ರಕರ್ತರು, ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕರೂ ಆಗಿದ್ದ ಶ್ರೀ ವಸಂತ್ ನಾಡಿಗೇರ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು.
ಪ್ರತಿಭಾನ್ವಿತರು ಮತ್ತು ಪ್ರಯೋಗಶೀಲರಾಗಿದ್ದ ಶ್ರೀಯುತರು ಕನ್ನಡಪ್ರಭ, ವಿಜಯ ಕರ್ನಾಟಕ, ವಿಶ್ವವಾಣಿ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅವರು ಮಾಧ್ಯಮ ಮೌಲ್ಯಗಳ… pic.twitter.com/Za5JgM9BtH
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 9, 2024
ಈ ಕುರಿತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ತಮ್ಮ ಎಕ್ಸ್ ಖಾತೆಯಲ್ಲಿ, ಹಿರಿಯ ಪತ್ರಕರ್ತರು, ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕರೂ ಆಗಿದ್ದ ವಸಂತ ನಾಡಿಗೇರ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ಪ್ರತಿಭಾನ್ವಿತರು ಮತ್ತು ಪ್ರಯೋಗಶೀಲರಾಗಿದ್ದ ಶ್ರೀಯುತರು ಕನ್ನಡಪ್ರಭ, ವಿಜಯ ಕರ್ನಾಟಕ, ವಿಶ್ವವಾಣಿ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅವರು ಮಾಧ್ಯಮ ಮೌಲ್ಯಗಳ ಪ್ರತೀಕವಾಗಿದ್ದರು. ವಸಂತ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಕೃಷಿಗೆ ಡಿಜಿಟಲ್ ಸ್ಪರ್ಶ; ಆಧಾರ್‌ನಂತೆ ರೈತರ ಜಮೀನಿಗೆ ಐಡಿ, ಡಿಜಿಟಲ್ ಮೂಲಕ ಬೆಳೆ ಸಮೀಕ್ಷೆ