ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಆರ್ ಎನ್ ಸುದರ್ಶನ್(78) ನಿಧನರಾಗಿದ್ದಾರೆ.
ಸಪ್ಟೆಂಬರ್ 5ರ ನಸುಕಿನ ಜಾವ ಮನೆಯ ಸ್ನಾನಗೃಹದಲ್ಲಿ ಜಾರಿ ಬಿದ್ದಿದ್ದ ಸುದರ್ಶನ್ ಅವರನ್ನು ಬನ್ನೇರುಘಟ್ಟದ್ದಲ್ಲಿರುವ ಸಾಗರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ವಯೋಸಹಜ ಖಾಯಿಲೆಯಿಂದಲೂ ಬಳಲುತ್ತಿದ್ದ ಸುದರ್ಶನ್ರವರಿಗೆ ಚಿಕಿತ್ಸೆ ಫಲಿಸದೇ ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
‘ನಗುವ ಹೂವು’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ಸುದರ್ಶನ್ ಸುಮಾರು 60ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದರು. ‘ವಿಜಯನಗರದ ವೀರ ಪುತ್ರ’ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಚಲನಚಿತ್ರ ಖಳನಟ, ಕನ್ನಡ ಚಿತ್ರರಂಗದಲ್ಲಿ ಲಂಬು ನಾಗೇಶ್ ಎಂದೇ ಹೆಸರುವಾಸಿಯಾಗಿದ್ದ ಪೋಷಕ ನಟ ನಾಗೇಶ್ ಅವರು ಸೆಪ್ಟೆಂಬರ್ 1ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು.