ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಪಶುವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣದ ಆರೋಪಿಯೊರ್ವನ ತಾಯಿ, ಸಂತ್ರಸ್ತೆಯನ್ನು ಕೊಲೆ ಮಾಡಿದ ಹಾಗೆಯೇ ತಪ್ಪು ಮಾಡಿದ ನನ್ನ ಮಗನನ್ನು ಕೊಂದುಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮಹ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು
Advertisement
Advertisement
ಈ ಪ್ರಕರಣ ಇಡೀ ದೇಶದಲ್ಲೇ ಸಂಚಲನ ಮೂಡಿಸಿದ್ದು, ಪ್ರಿಯಾಂಕಾ ರೆಡ್ಡಿ ಸಾವಿಗೆ ನ್ಯಾಯ ಕೊಡಿಸಿ ಆರೋಪಿಗಳನ್ನು ಗಲ್ಲಿಗೇರಿಸಿ ಎಂದು ಜನರು ಸಿಡಿದೆದ್ದಿದ್ದಾರೆ. ಈ ಮಧ್ಯೆ ಆರೋಪಿ ಚೆನ್ನಕೇಶವುಲು ತಾಯಿ ಪ್ರತಿಕ್ರಿಯಿಸಿ, ಮಗನ ಅಮಾನುಷ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ನನ್ನ ಮಗ ಈ ಪಾಪ ಮಾಡಿದ್ದಾನೆ ಎಂದು ಸಾಬೀತಾದರೆ ಖಂಡಿತಾ ಆತನಿಗೆ ಶಿಕ್ಷೆಯಾಗಬೇಕು. ಬೇಕಾದರೆ ಪ್ರಿಯಾಂಕ ರೆಡ್ಡಿಯನ್ನು ಹೇಗೆ ಆರೋಪಿಗಳು ಅಮಾನುಷವಾಗಿ ಕೊಲೆಗೈದಿದ್ದಾರೋ ಹಾಗೆಯೇ ನನ್ನ ಮಗನನ್ನೂ ಹತ್ಯೆ ಮಾಡಿ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಕೊಲೆಗೈದ ಜಾಗದ ಸಮೀಪದಲ್ಲೇ ಸಿಕ್ತು ಮತ್ತೋರ್ವ ಮಹಿಳೆ ಶವ
Advertisement
Advertisement
ನಾನು ಒಬ್ಬಳು ಹೆಣ್ಣು. ನನಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮಕ್ಕಳಿಗೆ ಹೀಗಾದರೆ ಹೆತ್ತ ಕರುಳು ಎಷ್ಟು ನೋವು ಪಡುತ್ತದೆ ಎಂದು ನನಗೂ ತಿಳಿದಿದೆ. ನನ್ನ ಮಗ ತಪ್ಪಿತಸ್ಥ ಆಗಿದ್ದರೆ ಆತನಿಗೆ ಶಿಕ್ಷೆ ಖಂಡಿತ ಆಗಬೇಕು. ಈ ರೀತಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ಹೀನಾಯ ಕೆಲಸ ಮಾಡುವವರಿಗೆ ಕಠಿಣ ಶಿಕ್ಷೆ ಕೊಡಬೇಕು. ಆಗ ಮುಂದೆ ಇಂತಹ ದುಷ್ಕೃತ್ಯಕ್ಕೆ ಯಾರು ಕೈ ಹಾಕಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು
Correction: Protesters, including students of government schools, block Hyderabad-Bangalore Highway in protest against the rape and murder of a woman veterinary doctor. #Telangana pic.twitter.com/tqsGJLVaXU
— ANI (@ANI) November 30, 2019
ಈಗಾಗಲೇ ದೇಶಾದ್ಯಂತ ಈ ಪ್ರಕರಣ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘಿಸಿದವರಿಗೆ ದೊಡ್ಡ ಮೊತ್ತದ ದಂಡ ವಿಧಿಸಿ ಬಿಸಿ ಮುಟ್ಟಿಸಿ ನಿಯಮ ಪಾಲಿಸುವಂತೆ ಸರ್ಕಾರ ಮಾಡಿದೆ. ಅದರಂತೆ ಅತ್ಯಾಚಾರಿಗಳಿಗೆ ಗಲ್ಲಿಗೇರಿಸಿ, ಆಗ ಕಾಮುಕರ ಅಟ್ಟಹಾಸ ಅಂತ್ಯವಾಗುತ್ತದೆ. ಇಂಥವರಿಗೆ ಜೀವಾವಧಿ ಶಿಕ್ಷೆ ನೀಡರೆ ಆರಾಮಾಗಿ ಸಾಯುವ ತನಕ ಜೈಲಿನಲ್ಲಿ ಇರುತ್ತಾರೆ. ಅದರ ಬದಲು ಶಿಕ್ಷೆ ಸಾಬೀತಾದ ಕೂಡಲೇ ಗಲ್ಲಿಗೇರಿಸಿ ಎಂದು ಆಗ್ರಹಿಸಿದ್ದಾರೆ.
#WATCH: Locals hurled slippers on police after police stopped them from entering Shadnagar police station, where the accused in rape&murder case of the woman veterinary doctor, were lodged earlier today. Accused have been shifted to Chanchalguda Central Jail. #Telangana pic.twitter.com/f8nV4yLiw3
— ANI (@ANI) November 30, 2019
ಆರೋಪಿಗಳ ವೈದ್ಯಕೀಯ ಪರೀಕ್ಷೆ ಆದ ಬಳಿಕ ಪೊಲೀಸರು ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಆರೋಪಿಗಳನ್ನು 14 ದಿನಗಳ ಕಾಲ ರಿಮ್ಯಾಂಡ್‍ನಲ್ಲಿ ಇರಿಸುವಂತೆ ಆದೇಶಿಸಿದೆ.