ಬೀದರ್: ಇಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಯಲದ ಹತ್ತನೇ ಘಟಿಕೋತ್ಸವ ನಡೆಯಿತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ವಿವಿಧ ವಿಭಾಗಗಳಲ್ಲಿ ಹೆಚ್ಚು ಅಂಕ ಪಡೆದ 34 ವಿದ್ಯಾರ್ಥಿಗಳಿಗೆ ಒಟ್ಟು 66 ಚಿನ್ನದ ಪದಕ ಪ್ರದಾನ ಮಾಡಿದರು.
ಹಾಸನದ ಪಶುವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಅಶ್ವಿನಿ 11 ಚಿನ್ನದ ಪದಕ ಪಡೆದಿದ್ದಾರೆ. ರೈತನ ಮಗಳಾಗಿರುವ ಅಶ್ವಿನಿ ಸಂತಸ ವ್ಯಕ್ತಪಡಿಸಿದ್ದು, ಪೋಷಕರು, ಸ್ನೇಹಿತರು ಹಾಗೂ ಶಿಕ್ಷಕರ ಮಾರ್ಗದರ್ಶದಿಂದ ನಾನು 11 ಚಿನ್ನದ ಪದಕ ಗೆಲ್ಲಲು ಸಾಧ್ಯವಾಯಿತು. ಅವರಿಗೆ ನನ್ನ ಧನ್ಯವಾದಗಳು ಎಂದು ಹೇಳಿದ್ದಾರೆ.
ಘಟಿಕೋತ್ಸವದಲ್ಲಿ 447 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಹಾಗೂ 29 ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಬಂಡೆಪ್ಪ ಖಾಶಂಪುರ, ಸಂಸದ ಭಗವಂತ್ ಖೂಬಾ ಭಾಗವಹಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv