Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದಾರ್ಥ್ ಕೊನೆಯ ಮೊಬೈಲ್ ಲೊಕೇಷನ್ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಸಿದ್ದಾರ್ಥ್ ಕೊನೆಯ ಮೊಬೈಲ್ ಲೊಕೇಷನ್ ಪತ್ತೆ

Dakshina Kannada

ಸಿದ್ದಾರ್ಥ್ ಕೊನೆಯ ಮೊಬೈಲ್ ಲೊಕೇಷನ್ ಪತ್ತೆ

Public TV
Last updated: July 30, 2019 7:57 pm
Public TV
Share
3 Min Read
siddartha 1
SHARE

ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧರ್ಥ್ ಅವರು ಮಂಗಳೂರು ಸಮೀಪ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಮಧ್ಯೆ ಸಿದ್ಧಾರ್ಥ್ ಅವರ ಮೊಬೈಲ್‍ನ ಕೊನೆಯ ಲೊಕೇಷನ್ ಸಹ ಸೇತುವೆ ಮಧ್ಯದಲ್ಲಿ ತೋರಿಸುತ್ತಿರವ ವಿಚಾರ ಬೆಳಕಿಗೆ ಬಂದಿದೆ.

ಈಗಾಗಲೇ ಈ ಪ್ರಕರಣ ಸಂಬಂಧ ಪೊಲೀಸರು ಪ್ರಾಥಮಿಕ ತನಿಖೆಯನ್ನು ಅಂತ್ಯಗೊಳಿಸಿದ್ದಾರೆ. ಮುಂಜಾನೆಯಿಂದ ಸಿದ್ದಾರ್ಥ್ ಅವರ ಕಾರು ಚಾಲಕ ಬಸವರಾಜ್ ಅವರನ್ನು ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ. ಸಿದ್ಧಾರ್ಥ್ ಮೊಬೈಲ್ ಲೋಕೇಷನ್ ಪರಿಶೀಲಿಸಿದಾಗ ಸೇತುವೆಯ ಮಧ್ಯಭಾಗದಲ್ಲಿ ಅವರ ಕೊನೆಯ ಮೊಬೈಲ್ ಲೋಕೇಷನ್ ಪತ್ತೆಯಾಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

vlcsnap 2019 07 30 14h00m52s252

ಬೆಳಗ್ಗೆ ತನಿಖೆ ನಡೆಸಲು ಆಗಮಿಸಿದ್ದ ಶ್ವಾನ ದಳದ ನಾಯಿ ಸಹ ಸೇತುವೆ ಮಧ್ಯಭಾಗದವರೆಗೆ ಬಂದಿತ್ತು. ಪೊಲೀಸ್ ವಿಚಾರಣೆ ವೇಳೆ ಡ್ರೈವರ್, ಸೋಮವಾರ ಸಂಜೆ ಹೊತ್ತಿನಲ್ಲಿ ಸೇತುವೆಯ ಬಳಿ ಕಾರನ್ನು ನಿಲ್ಲಿಸು ಎಂದು ಸಿದ್ಧಾರ್ಥ್ ಹೇಳಿದ್ದರು. ಕಾರಿನಿಂದ ಇಳಿದು ಸೇತುವೆಯ ಮೇಲೆ ಸಿದ್ದಾರ್ಥ್ ನಡೆದುಕೊಂಡು ಫೋನಿನಲ್ಲಿ ಮಾತನಾಡುತ್ತಾ ಹೋಗುತ್ತಿದ್ದರು. ಕೆಲ ನಿಮಿಷ ಕಳೆದರೂ ಅವರು ಬಾರದೇ ಇದ್ದಾಗ ಕರೆ ಮಾಡಿದ್ದೆ. ಈ ವೇಳೆ ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ತಿಳಿಸಿದ್ದರು.

ಡ್ರೈವರ್ ಹೇಳಿದ್ದೇನು?
ನಾನು ಕಳೆದು ಮೂರು ವರ್ಷಗಳಿಂದ ಕಾಫಿ ಡೇ ಮಾಲೀಕರಾದ ಸಿದ್ಧಾರ್ಥ್ ಅವರು ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಸೋಮವಾರ ಎಂದಿನಂತೆ ಸದಾಶಿವನಗರದಲ್ಲಿರುವ ಸಿದ್ಧಾರ್ಥ್ ಅವರ ಮನೆಗೆ ಕೆಲಸಕ್ಕೆ ಹೋಗಿದ್ದೆ. ನಂತರ ಸುಮಾರು 8 ಗಂಟೆಗೆ ಸಿದ್ಧಾರ್ಥ್ ಅವರು ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಅವರ ಕಚೇರಿಗೆ ಇನ್ನೋವಾ ಕಾರಿನಲ್ಲಿ ಕರೆದುಕೊಂಡು ಹೋದೆ. ನಂತರ ಕಚೇರಿಯಲ್ಲಿದ್ದು, ಬೆಳಗ್ಗೆ 11 ಗಂಟೆ ವಾಪಸ್ ಮನೆಗೆ ಬಂದೆವು ಎಂದು ತಿಳಿಸಿದ್ದಾರೆ.

vlcsnap 2019 07 30 14h00m45s202

ಮನೆಗೆ ಬಂದ ನಂತರ ಸಿದ್ಧಾರ್ಥ್ ಅವರು ಊರಿಗೆ ಹೋಗಬೇಕಾಗಿದೆ ನೀನು ಮನೆಗೆ ಹೋಗಿ ಲಗೇಜ್ ತೆಗೆದುಕೊಂಡು ಬಾ ಎಂದು ಹೇಳಿದರು. ನಾನು ಮನೆಗೆ ಹೋಗಿ ಲಗೇಜ್ ತೆಗೆದುಕೊಂಡು ಬಂದೆ. ಬಳಿಕ ಸುಮಾರು 5.30ಕ್ಕೆ ಸಕಲೇಶಪುರದ ಕಡೆಗೆ ಹೋಗು ಎಂದರು. ನಾನು ಅವರು ಹೇಳಿದಂತೆ ಕೆಎ 03 ಎನ್‍ಸಿ, 2592 ಕಾರಿನಲ್ಲಿ ಬೆಂಗಳೂರನ್ನು ಬಿಟ್ಟು ಸಕಲೇಶಪುರದ ಕಡೆ ಚಲಾಯಿಸಿಕೊಂಡು ಹೋದೆ. ಸಕಲೇಶಪುರ ಸಮೀಪಿಸುತ್ತಿದಂತೆ ಮುಂದೆ ಮಂಗಳೂರು ಕಡೆ ಹೋಗುವಾ ಎಂದು ತಿಳಿಸಿದರು. ನಾನು ಅವರು ತಿಳಿಸಿದಂತೆ ಅವರನ್ನು ಕರೆದುಕೊಂಡು ಮಂಗಳೂರು ನಗರಕ್ಕೆ ಪ್ರವೇಶಿಸುವ ಸರ್ಕಲ್(ಪಂಪ್‍ವೆಲ್) ಬಳಿ ಬಂದಾಗ ಸಿದ್ಧಾರ್ಥ್ ಎಡಗಡೆ ತೆಗೆದುಕೋ ಸೈಟ್‍ಗೆ ಹೋಗಬೇಕು ಎಂದು ಹೇಳಿದರು.

ಸಿದ್ಧಾರ್ಥ್ ಹೇಳಿದಂತೆ ನಾನು ಎಡಗಡೆಗೆ ತೆಗೆದುಕೊಂಡು ಕೇರಳ ಹೆದ್ದಾರಿಯಲ್ಲಿ 3-4 ಕಿ.ಮೀ ಬಂದಾಗ ನದಿಗೆ ಅಡ್ಡಲಾಗಿ ಕಟ್ಟಿರುವ ಒಂದು ದೊಡ್ಡ ಸೇತುವೆ ಆರಂಭವಾಗುತ್ತಿದ್ದಂತೆ ಕಾರು ನಿಲ್ಲಿಸು ಎಂದು ಹೇಳಿದರು. ನಂತರ ಅವರು ಕಾರಿನಿಂದ ಇಳಿದು ವಾಕಿಂಗ್ ಹೋದರು. ಹೀಗೆ ಇಳಿದು ಫೋನಿನಲ್ಲಿ ಮಾತನಾಡಿಕೊಂಡು ಸ್ವಲ್ಪ ದೂರ ಹೋದವರೇ ಮತ್ತೆ ವಾಪಸ್ ಕಾರು ಬಳಿ ಬಂದರು. ನಂತರ ಪುನಃ ಫೋನಿನಲ್ಲಿ ಮಾತನಾಡಿಕೊಂಡು ಒಂದಷ್ಟು ದೂರ ಹೋದರು. ಹೀಗೆ ಹೋಗುವಾಗ ಅವರನ್ನು ನಾನು ನೋಡುತ್ತಿದ್ದೆ. ಅವರು ಕಾಣಿಸದೇ ಇದ್ದಾಗ ನಾನು ಅವರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಹೋದೆ.

siddharth 2

ನಾನು ಬರುತ್ತಿರುವುದನ್ನು ನೋಡಿ ಅವರು `ನೀನು ಇಲ್ಲೇ ಇರು ಬರಬೇಡ’ ಎಂದು ಹೇಳಿ ಹೋದರು. ಸುಮಾರು ಅರ್ಧ ಗಂಟೆಯಾದರೂ ಅವರು ವಾಪಸ್ ಬಂದಿಲ್ಲ. ಇದರಿಂದ ಆತಂಕಗೊಂಡ ನಾನು ಅವರಿಗೆ ಫೋನ್ ಮಾಡಿದೆ. ಆದರೆ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ನಾನು ಮತ್ತಷ್ಟು ಆತಂಕಗೊಂಡಿದ್ದು, ನಾನು ಎಸ್.ಎಂ ಕೃಷ್ಣ ಅವರಿಗೆ ಫೋನ್ ಮಾಡಿ ನಡೆದ ಘಟನೆಯ ಬಗ್ಗೆ ತಿಳಿಸಿದೆ. ತಕ್ಷಣ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದೇನೆ ಎಂದು ನಡೆದ ಘಟನೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಸೋಮವಾರ ಸಂಜೆ ನೇತ್ರಾವತಿ ನದಿಗೆ ಜಪ್ಪಿನಮೊಗರು ಎಂಬಲ್ಲಿ ನಿರ್ಮಿಸಿರುವ ಸೇತುವೆ ಬಳಿಯಿಂದ ಸಿದ್ಧಾರ್ಥ್ ನಾಪತ್ತೆಯಾದ ಹಿನ್ನೆಲೆಯಲ್ಲಿ `ಆಪರೇಷನ್ ಸಿದ್ಧಾರ್ಥ್’ ಹೆಸರಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕಾರ್ಯಾಚರಣೆಯಲ್ಲಿ ವಿವಿಧ ಇಲಾಖೆಗಳ ಸುಮಾರು 200 ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗಿಯಾಗಿದ್ದಾರೆ.

TAGGED:BangalorebengalurucaseMobile Lost LocationpolicePublic TVSiddharthನಾಪತ್ತೆ ಪ್ರಕರಣಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಮೊಬೈಲ್ ಲಾಸ್ಟ್ ಲೊಕೇಷನ್ಸಿದ್ಧಾರ್ಥ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
2 minutes ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
46 minutes ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
1 hour ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
2 hours ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
2 hours ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?