– ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳ ನಡುವೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಆಯುಧ ಪೂಜೆಯಂದು ಶಸ್ತ್ರಾಸ್ತ್ರಗಳನ್ನು ಹಂಚಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
Advertisement
ಮಂಗಳೂರಿನ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಹಿಂದೂಪರ ಸಂಘಟನೆಯಿಂದ ತ್ರಿಶೂಲ ದೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹರಿತದ ಕತ್ತಿಯನ್ನು ಹಂಚಲಾಗಿದೆ. 150 ಮಂದಿಗೆ ತ್ರಿಶೂಲ ಹಂಚಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಲಸಿಕೆ ಪಡೆಯದೇ ಓಡಾಟ ನಡೆಸುವವರ ಮೇಲೆ ನಿಗಾ
Advertisement
Advertisement
ತ್ರಿಶೂಲ ದೀಕ್ಷೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಲ್ಲದೆ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿದೆ. ತ್ರಿಶೂಲ ನೆಪದಲ್ಲಿ ಹರಿತದ ಕತ್ತಿಯನ್ನು ನೀಡಿ ಶಸ್ತ್ರ ಹಿಡಿಯಲು ಪ್ರೇರಣೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪತಿಯನ್ನು ಕೊಂದು ಸೂಟ್‍ಕೇಸ್‍ನಲ್ಲಿ ಸಾಗಿಸಿದಳು
Advertisement
ಇತ್ತೀಚೆಗೆ ಸುರತ್ಕಲ್ ಮತ್ತು ಮೂಡಬಿದಿರೆಯಲ್ಲಿ ಅನೈತಿಕ ಪೊಲೀಸ್‍ಗಿರಿ ಪ್ರಕರಣ ವರದಿ ಆಗಿತ್ತು. ಅನೈತಿಕ ಪೊಲೀಸ್‍ಗಿರಿಯನ್ನು ಖುದ್ದು ಸಿಎಂ ಬಸವರಾಜ ಬೊಮ್ಮಾಯಿಯವರೇ ಆಕ್ಷನ್-ರಿಯಾಕ್ಷನ್ ಎಂದು ಹೇಳಿ ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು