ಮಂಗಳೂರು: ನಗರದಲ್ಲಿ ದಾಂಡಿಯಾ ನೃತ್ಯಕ್ಕೆ ವಿಶ್ವ ಹಿಂದೂ ಪರಿಷತ್ (VHP) ತೀವ್ರ ವಿರೋಧ ವ್ಯಕ್ತಪಡಿಸಿದೆ.
ಉತ್ತರ ಭಾರತದಲ್ಲಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ನೃತ್ಯ ಇದಾಗಿದೆ. ಇದೀಗ ಈ ದಾಂಡಿಯಾ ನೃತ್ಯ (Dandiya Dance) ಹೆಸರಲ್ಲಿ ಮಂಗಳೂರಿನಲ್ಲಿ ಮದ್ಯ, ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿ ವಿಹೆಚ್‍ಪಿ ದೂರು ನೀಡಿದೆ.
Advertisement
Advertisement
ಮಂಗಳೂರಿನ (Mangaluru) ಹಲವು ಹೊಟೇಲ್ ಗಳು ಸೇರಿ ಸುಮಾರು 23 ಕಡೆ ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜನೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನೂರಾರು ಸಂಖ್ಯೆಯಲ್ಲಿ ಉತ್ತರ ಭಾರತದ ಕಡೆಯಿಂದ ದಾಂಡಿಯಾ ನೃತ್ಯ ಕಲಾವಿದರು ಮಂಗಳೂರಿಗೆ ಬಂದಿಳಿದಿದ್ದಾರೆ. ನವರಾತ್ರಿ ಅಂಗವಾಗಿ ಇಂದಿನಿಂದ ನಾಲ್ಕು ದಿನಗಳವರೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇದನ್ನೂ ಓದಿ: ಗುತ್ತಿಗೆದಾರರಿಂದ ಲೂಟಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ ಸರ್ಕಾರ – ವಿಜಯೇಂದ್ರ ವಾಗ್ದಾಳಿ
Advertisement
Advertisement
ದಾಂಡಿಯಾ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಮಾದಕ ವಸ್ತುಗಳನ್ನು ಬಳಸುತ್ತಾರೆ. ಡ್ರಗ್ಸ್, ಮಾದಕ ದ್ರವ್ಯ, ಮದ್ಯಪಾನ ಮಾಡಿ ಅಸಭ್ಯ ನೃತ್ಯ ಮಾಡುತ್ತಾರೆ ಎಂದು ಆರೋಪಿಸಿ ದುರ್ಗವಾಹಿನಿ ಸಂಘಟನೆ ಮಂಗಳೂರು ಪೊಲೀಸ್ ಕಮಿಷನರ್ ಗೆ ಮನವಿ ಮಾಡಿದೆ.
Web Stories