ನವದೆಹಲಿ: ದೆಹಲಿಯ ಭೀಕರ ಹತ್ಯೆ ಪ್ರಕರಣವನ್ನು ಲವ್ ಜಿಹಾದ್ (Love Jihad) ಆಯಾಮದಲ್ಲಿ ತನಿಖೆ ನಡೆಸುವಂತೆ ವಿಶ್ವಹಿಂದೂ ಪರಿಷತ್ (VHP) ಪೊಲೀಸರಿಗೆ (Delhi Police) ಮನವಿ ಮಾಡಿದೆ.
Advertisement
ಹಿಂದೂ ಸಂಘಟನೆಗಳು (Hindu Organization) ಈ ಬಗ್ಗೆ ಧ್ವನಿ ಎತ್ತಿದ್ದು, ಲವ್ ಜಿಹಾದ್‌ಗೆ (Love Jihad) ಶ್ರದ್ಧಾ ಬಲಿಯಾಗಿದ್ದಾಳೆ ಎಂದು ವಾದಿಸುತ್ತಿವೆ. ಈ ಬೆನ್ನಲ್ಲೇ ವಿಶ್ವಹಿಂದೂ ಪರಿಷತ್ ಲವ್ ಜಿಹಾದ್ ಆಯಾಮದಲ್ಲಿ ತನಿಖೆ ಮಾಡುವಂತೆ ದೆಹಲಿ ಪೊಲೀಸರಿಗೆ (Delhi Police) ಮನವಿ ಮಾಡಿದೆ. ಅಲ್ಲದೇ ಲವ್ ಜಿಹಾದ್‌ಗೆ ಬಲಿಯಾದ್ರೇ ಇದೇ ಗತಿ ಅಂತಾನೂ ಪೋಸ್ಟ್ಗಳನ್ನು ಹಾಕುತ್ತಿವೆ. ಇದನ್ನೂ ಓದಿ: ಮನೆಯಲ್ಲಿ ಶ್ರದ್ಧಾಳ ದೇಹದ ಪೀಸ್‍ಗಳಿದ್ರೂ ಬೇರೆ ಯುವತಿಯನ್ನು ಮನೆಗೆ ಕರೆದು ಸೆಕ್ಸ್ ಮಾಡ್ತಿದ್ದ!
Advertisement
Advertisement
ಅಫ್ತಾಬ್‌ಗೆ ಹಿಂದಿ ಗೊತ್ತಿಲ್ಲ:
ಪೊಲೀಸರ ಬಳಿ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿರುವ ಆರೋಪಿ ಅಫ್ತಾಬ್ ತನಗೆ ಇಂಗ್ಲಿಷ್ ಭಾಷೆ (English Language) ಮಾತ್ರ ಬರುತ್ತದೆ. ಹಿಂದಿ ಭಾಷೆ (Hindi Language) ಬರೋದಿಲ್ಲ ಎಂದು ಹೇಳಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 7,600 ಶಾಲಾ ಕೊಠಡಿಗಳ ಮುಂದೆ ವಿವೇಕಾನಂದ ಭಾವಚಿತ್ರ ಮುದ್ರಿಸಲು ಸರ್ಕಾರ ಪ್ಲ್ಯಾನ್
Advertisement
ರಾಷ್ಟ್ರ ರಾಜಧಾನಿಯಲ್ಲಿ ತನ್ನೊಂದಿಗೆ ಲಿವ್ ಇನ್ ರಿಲೇಶನ್‌ಶಿಪ್ (live In Relationship) ನಲ್ಲಿದ್ದ ಗೆಳತಿಯ ಹತ್ಯೆ ಮಾಡಿ, ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಅದನ್ನು ಫ್ರಿಡ್ಜ್‌ನಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅನೇಕ ಭಯಾನಕ ಸಂಗತಿಗಳು ಹೊರಬಿದ್ದಿವೆ. ಆರೋಪಿ ಅಫ್ತಾಬ್ ಹಾಗೂ ಶ್ರದ್ಧಾ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಮೇ 18ರಂದು ಜಗಳವಾದಾಗ ಶ್ರದ್ಧಾಳ ಎದೆಯ ಮೇಲೆ ಕುಳಿತು ಆಕೆಯ ಕತ್ತುಹಿಸುಕಿ ಸಾಯಿಸಿದ್ದಾನೆ.
ಬಳಿಕ ದೇಹವನ್ನು ಕತ್ತರಿಸೋದು ಹೇಗೆ? ಅದನ್ನು ಡಿಎನ್‌ಎಗಳ ಸಾಕ್ಷ್ಯಾಧಾರವೂ ಸಿಗದಂತೆ ದೇಹವನ್ನ ವಿಲೇವಾರಿ ಮಾಡೋದು ಹೇಗೆ ಎಂಬ ಮಾಹಿತಿಗಳ ಬಗ್ಗೆ ಗೂಗಲ್‌ನಲ್ಲಿ ಹುಡುಕಾಡಿದ್ದಾನೆ. ನಂತರ ದೇಹವನ್ನು 35 ಪೀಸ್‌ಗಳಾಗಿ ತಂಡು ಮಾಡಿದ್ದು, ಅದನ್ನು ಸಂಗ್ರಹಿಸಲು 300 ಲೀಟರ್ ಸಾಮರ್ಥ್ಯದ ಹೊಸ ಫ್ರಿಡ್ಜ್ ಸಹ ಖರೀದಿಸಿದ್ದಾನೆ. ದೇಹದ ಮಾಂಸದ ವಾಸನೆ ಹರಡಬಾರದೆಂದು ದಿನವೂ ಅಗರಬತ್ತಿ ಹಚ್ಚಿಡುತ್ತಿದ್ದ. ಈ ನಡುವೆ ಶ್ರದ್ಧಾಳನ್ನು ಕೊಲೆ ಮಾಡಿ ಕೆಲ ದಿನಗಳ ನಂತರ ಮತ್ತೊಬ್ಬ ಮಹಿಳೆಯನ್ನು ತನ್ನ ಅಪಾರ್ಟ್ಮೆಂಟ್‌ಗೆ ಕರೆದು ಸೆಕ್ಸ್ ಮಾಡ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ.