ಕಾಂತಾರ (Kantara) ಸಿನಿಮಾದ ‘ವರಾಹ ರೂಪಂ’ ಹಾಡಿಗೆ ಕದ್ದಿರುವ ಆರೋಪ ಕೇಳಿ ಬಂದಿತ್ತು. ಈ ಹಾಡನ್ನು ತಮ್ಮ ನವರಸಂ (Navarasam) ಗೀತೆಯಿಂದ ಕದ್ದಿರುವುದಾಗಿ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಇದು ಭಾರೀ ಚರ್ಚೆಗೂ ಕಾರಣವಾಗಿತ್ತು. ದುಡ್ಡಿಗಾಗಿ ಅವರು ಆ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಇದೀಗ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸದಸ್ಯರು ಉತ್ತರಿಸಿದ್ದು, ನಮಗೆ ಯಾವುದೇ ಹಣ ಬೇಕಿಲ್ಲ. ಕ್ರೆಡಿಟ್ ಕೊಟ್ಟು ಉಚಿತವಾಗಿ ಬಳಸಿಕೊಳ್ಳಬಹುದು ಎಂದು ತಂಡದ ಸದಸ್ಯ ವಿಯಾನ್ ಹೇಳಿಕೆ ನೀಡಿದ್ದಾರೆ.
Advertisement
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ (Varaha Rupam) ಹಾಡನ್ನು ಸಿನಿಮಾದಲ್ಲಿ ಬಳಸದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು, ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿತ್ತು. ಈ ಹಾಡನ್ನು ನಾನು ಯಾವುದರಿಂದಲೂ ಕದ್ದಿಲ್ಲ ಎಂದು ಈಗಾಗಲೇ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರೂ, ಕೇರಳದ ಕೋಝಿಕ್ಕೋಡ್ ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ
Advertisement
Advertisement
ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ (Thaikudam Bidge Band) ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್ ನ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿಯೂ ತಿಳಿಸಿತ್ತು. ಹಾಗಾಗಿ ತಂಡವು ಕೋಝಿಕೋಡ್ ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.
Advertisement
ಈ ಕುರಿತು ಸ್ವತಃ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ‘ನಮ್ಮ ನವರಸಂ ಮತ್ತು ವರಾಹ ರೂಪಂ ಹಾಡು ಅದೊಂದು ಹೋಲಿಕೆಯಲ್ಲಿ ನಮ್ಮ ಸಂಗೀತವನ್ನು ಕದಿಯಲಾಗಿದೆ’ ಎಂದು ಈ ಹಿಂದೆ ಬ್ಯಾಂಡ್ ಆರೋಪ ಮಾಡಿತ್ತು. ಕಾಂತಾರ ಟೀಮ್ ಹಾಡನ್ನು ಪ್ರೇರಿತವಾಗಿ ತಗೆದುಕೊಂಡಿಲ್ಲ, ಕೃತಿಚೌರ್ಯ ಮಾಡಿದೆ ಎಂದೂ ಹೇಳಿದ್ದರು. ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.