ಬೆಂಗಳೂರು: ಆಟೋ ಮೊಬೈಲ್ ಕ್ಷೇತ್ರದ ದಿಗ್ಗಜ, ಟೊಯೋಟ ಕಿರ್ಲೋಸ್ಕರ್ ಮೋಟಾರ್ನ (Toyota Kirloskar) ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) (64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಿರ್ಲೋಸ್ಕರ್ ಅವರಿಗೆ ಮಂಗಳವಾರ ತಡರಾತ್ರಿ ಹೃದಯಾಘಾತ ಸಂಭವಿಸಿದೆ. ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಅಗ್ನಿ ಅವಘಡ – 3 ಮಕ್ಕಳು ಸೇರಿ ಕುಟುಂಬದ 6 ಮಂದಿ ಸಾವು
ಕಿರ್ಲೋಸ್ಕರ್ ಅವರು ಪತ್ನಿ ಗೀತಾಂಜಲಿ ಕಿರ್ಲೋಸ್ಕರ್ ಮತ್ತು ಮಗಳು ಮಾನಸಿ ಕಿರ್ಲೋಸ್ಕರ್ ಅವರನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ನ ಉಪಾಧ್ಯಕ್ಷ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿಸಲು ದುಃಖವಾಗಿದೆ ಎಂದು ವಾಹನ ತಯಾರಕರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಉಜ್ಜಯಿನಿಯ ಮಹಾಕಾಲ ದೇವಸ್ಥಾನದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ
ನವೆಂಬರ್ 25 ರಂದು ಮುಂಬೈನಲ್ಲಿ ನಡೆದ ಟೊಯೊಟಾ ಇನ್ನೋವಾ ಹೈಕ್ರಾಸ್ ಅನಾವರಣದಲ್ಲಿ ಕಿರ್ಲೋಸ್ಕರ್ ಭಾಗವಹಿಸಿದ್ದರು.