ಶಿವಮೊಗ್ಗ: ಮಗಳ ಹುಟ್ಟುಹಬ್ಬಕ್ಕೆ ಸುತ್ತೋಲೆ ಹೊರಡಿಸಿದ ಮಾದರಿಯಲ್ಲಿ ಅತಿಥಿಗಳಿಗೆ ಆಹ್ವಾನ ನೀಡಿರುವ ಕುವೆಂಪು ವಿಶ್ವವಿದ್ಯಾನಿಲಯದ (Kuvempu University) ಕುಲಪತಿ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.
ತಮ್ಮ ಖಾಸಗಿ ಕಾರ್ಯಕ್ರಮಗಳಿಗೆ ಯಾವುದೇ ರಾಜಕಾರಣಿ ಆಗಿರಲಿ, ಸರ್ಕಾರಿ ಉನ್ನತ ಅಧಿಕಾರಿಯೇ ಆಗಿರಲಿ ಖಾಸಗಿಯಾಗಿಯೇ ಆಹ್ವಾನ ನೀಡುತ್ತಾರೆಯೇ ಹೊರತು, ಸರ್ಕಾರದ ಲೆಟರ್‌ಹೆಡ್‌ನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ಆದರೆ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಮ್ಮ ಮಗಳ ಹುಟ್ಟುಹಬ್ಬಕ್ಕೆ ಸರ್ಕಾರದ ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿ ಆಹ್ವಾನ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಅತ್ತೆ-ಸೊತೆ ಇದ್ರೆ ಯಾರಿಗೆ ದುಡ್ಡು ಹಾಕಬೇಕು, ಮನೆ ಯಜಮಾನಿ ಯಾರು? – ಗ್ಯಾರಂಟಿ ಬಗ್ಗೆ ಡಿಕೆಶಿ ಮಾತು
Advertisement
Advertisement
ವಿವಿಯ ಕುಲಪತಿ ಹೊರಡಿಸಿರುವ ಸುತ್ತೋಲೆ ಪತ್ರ ಎಲ್ಲೆಡೆ ವೈರಲ್ ಆಗಿದ್ದು, ಪರ-ವಿರೋಧಗಳ ಮಾತು ಕೇಳಿಬರುತ್ತಿದೆ. ಅಲ್ಲದೆ ಈ ಮೂಲಕ ಕುಲಪತಿಯವರು ಎಡವಟ್ಟು ಮಾಡಿದ್ದಾರೆ ಎಂಬ ದೂರು ಕೇಳಿಬಂದಿದೆ.
Advertisement
Advertisement
ಕುವೆಂಪು ವಿಶ್ವವಿದ್ಯಾನಿಲಯದ ಲೋಗೋ ಇರುವ ಸರ್ಕಾರಿ ಲೆಟರ್‌ನಲ್ಲಿ ಸುತ್ತೋಲೆ ಹೊರಡಿಸಿರುವ ಅವರು ಎಲ್ಲಾ ಅಧ್ಯಾಪಕರು, ಅಧ್ಯಾಪಕೇತರರು, ಅತಿಥಿ ಉಪನ್ಯಾಸಕರು, ಏಜೆನ್ಸಿ ಸಿಬ್ಬಂದಿ ತಮ್ಮ ಮನೆಯ ಖಾಸಗಿ ಸಮಾರಂಭಕ್ಕೆ ಖುದ್ದಾಗಿ ಹಾಜರಾಗುವಂತೆ ತಿಳಿಸಿದ್ಧಾರೆ. ಇದು ಫರ್ಮಾನು ಹೊರಡಿಸಿದ ರೀತಿಯಲ್ಲಿದೆ ಎಂಬ ಟೀಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಶವಸಂಸ್ಕಾರದ ವೇಳೆ ಕೊಲೆ ಶಂಕೆ ಪ್ರಕರಣಕ್ಕೆ ಟ್ವಿಸ್ಟ್ – ಪತ್ನಿಯೇ ಮಾಸ್ಟರ್‌ಮೈಂಡ್