ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ರೀತಿಯಲ್ಲೇ ಉಪರಾಷ್ಟ್ರಪತಿ ಚುನಾವಣೆಗೂ ಒಮ್ಮತ ಅಭ್ಯರ್ಥಿ ಆಯ್ಕೆ ಮಾಡಲು ಚಿಂತಿಸಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಇಡಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.
Advertisement
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ ವಹಿಸಿ ವಿಪಕ್ಷಗಳ ಸಭೆ ಕರೆದಿದ್ದರು. ಬಳಿಕ ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆ ಈ ಬಾರಿ ಅತಿದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ ಇತರೆ ಪಕ್ಷದ ನಾಯಕರಿಗಿಂತ ಮುಂಚೆಯೇ ಎಚ್ಚೆತ್ತುಕೊಂಡಿದ್ದು ಅಭ್ಯರ್ಥಿ ಆಯ್ಕೆಯನ್ನು ತಾನೇ ನೇತೃತ್ವ ವಹಿಸಿಕೊಳ್ಳುವ ಪ್ರಯತ್ನದಲ್ಲಿದೆ. ಇದನ್ನೂ ಓದಿ: ಸಂಭವಾಮಿ ಯುಗೇ ಯುಗೇ – ಗೀತೋಪದೇಶದ ಸಾಲನ್ನು ಪೋಸ್ಟ್ ಮಾಡಿದ್ದ ಗುರೂಜಿ ಹಂತಕ
Advertisement
Advertisement
ಹಿರಿಯ ನಾಯಕ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಹೈಕಮಾಂಡ್ ಈ ಜವಾಬ್ದಾರಿ ನೀಡಿದ್ದು, ಇತರೆ ಪಕ್ಷಗಳ ಜೊತೆಗೆ ಮಾತುಕತೆ ನಡೆಸಲು ಸೂಚಿಸಿದೆ. ಈ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ಶೀಘ್ರದಲ್ಲಿ ವಿಪಕ್ಷಗಳ ಸಭೆ ಕರೆಯಲು ತಯಾರಿ ನಡೆಸಿದ್ದು, ಒಮ್ಮತದ ಅಭ್ಯರ್ಥಿಗಾಗಿ ಪ್ರಯತ್ನಗಳು ನಡೆಯಲಿದೆ. ಇದನ್ನೂ ಓದಿ: ಸಂಭವಾಮಿ ಯುಗೇ ಯುಗೇ – ಗೀತೋಪದೇಶದ ಸಾಲನ್ನು ಪೋಸ್ಟ್ ಮಾಡಿದ್ದ ಗುರೂಜಿ ಹಂತಕ
Advertisement
ಉಪರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಪಕ್ಷದ ನಾಯಕರು ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಪ್ರಶ್ನೆಗೆ ವಿಶ್ವಾಸರ್ಹ ನಾಯಕರು ಉತ್ತರಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಆಯ್ಕೆ ಆಗಬಹುದು ಅಥವಾ ಬೇರೆ ಪಕ್ಷದಿಂದಲೂ ಆಗಬಹುದು. ಆದರೆ ಅವರು ಒಮ್ಮತದ ಅಭ್ಯರ್ಥಿಯಾಗಿರಲಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವ ಸಮಾವೇಶಕ್ಕಾಗಿ ವಿವಿಧ ಸಮಿತಿಗಳ ರಚನೆ – ಡಿಕೆಶಿಗಿಲ್ಲ ಸ್ಥಾನ
ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅಭ್ಯರ್ಥಿಯಾಗಿದ್ದು, ಅವರು ಬುಡಕಟ್ಟು ಸಮುದಾಯ ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಕೆಲವು ಪ್ರಾದೇಶಿಕ ಪಕ್ಷಗಳು ಅವರಿಗೆ ಬೆಂಬಲ ನೀಡಿವೆ. ಆದರೆ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪರಿಸ್ಥಿತಿ ಭಿನ್ನವಾಗಿರಲಿದೆ. ಈ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿ ಗೆಲ್ಲುವ ಸಾಧ್ಯತೆಗಳು ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.